ನವದೆಹಲಿ: ಭಾರತದ ಮಾರುಕಟ್ಟೆಯಲ್ಲಿ ಬುಧವಾರ(ಮಾರ್ಚ್ 03) ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 45,420 ರೂಪಾಯಿ, ಬೆಳ್ಳಿ ಒಂದು ಕೆಜಿಗೆ 66,600 ರೂಪಾಯಿಗೆ ತಲುಪಿದೆ.
ಇದನ್ನೂ ಓದಿ:ತಾವೇ ಕ್ಲಿಕ್ಕಿಸಿದ ಕಾಡು ಪ್ರಾಣಿಗಳ ಫೋಟೋ ಶೇರ್ ಮಾಡಿದ ದರ್ಶನ್..!
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಇಳಿಕೆಯಾದ ಪರಿಣಾಮ ಭಾರತದ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆ ಇಳಿಕೆ ಕಂಡಿರುವುದಾಗಿ ವರದಿ ತಿಳಿಸಿದೆ. ಕಳೆದ ವರ್ಷ ಆಗಸ್ಟ್ ನಿಂದ ಈವರೆಗೆ ಚಿನ್ನದ ಬೆಲೆಯಲ್ಲಿ 11 ಸಾವಿರ ರೂಪಾಯಿ ಇಳಿಕೆಯಾಗಿದೆ. 2020 ಆಗಸ್ಟ್ ನಲ್ಲಿ 10 ಗ್ರಾಂ ಚಿನ್ನದ ಬೆಲೆ 57,008 ರೂಪಾಯಿಗೆ ಏರಿಕೆಯಾಗಿತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಚೇತರಿಕೆಯಾಗುತ್ತಿದ್ದ ಹಿನ್ನೆಲೆಯಲ್ಲಿ ವಾರವಿಡೀ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ವ್ಯತ್ಯಯವಾಗುತ್ತಿತ್ತು ಎಂದು ವರದಿ ತಿಳಿಸಿದೆ. ಕಳೆದ ಆರು ತಿಂಗಳಿನಲ್ಲಿ ಚಿನ್ನದ ಬೆಲೆಯಲ್ಲಿ ಹತ್ತು ಸಾವಿರ ರೂಪಾಯಿ ಇಳಿಕೆಯಾಗಿದೆ.
ಚಿನ್ನದ ಬೆಲೆ ಆಯಾ ರಾಜ್ಯಗಳು ವಿಧಿಸುವ ತೆರಿಗೆ ಮತ್ತು ಸುಂಕಗಳಿಂದ ಬದಲಾಗಿರುತ್ತದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,250 ರೂಪಾಯಿ, ಮುಂಬೈನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 42,420, ಚೆನ್ನೈನಲ್ಲಿ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 42,660 ರೂಪಾಯಿ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ನ 10ಗ್ರಾಂ ಚಿನ್ನದ ಬೆಲೆ 42,450 ರೂಪಾಯಿ, ಇಂದು ಒಂದು ಗ್ರಾಂ ಚಿನ್ನಕ್ಕೆ 35 ರೂಪಾಯಿ ಏರಿಕೆಯಾಗಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 46,300 ರೂಪಾಯಿ.