Advertisement

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

11:50 AM Dec 22, 2024 | Team Udayavani |

ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್‌ ಆಪ್ತೆ ಎಂದು ಹೇಳಿಕೊಂಡು ಚಿನ್ನಾಭರಣ ಖರೀದಿಸಿ ವಂಚಿಸಿದ ಆರೋಪದಡಿ ಮಹಿಳೆಯೊಬ್ಬರನ್ನು ಕಮರ್ಷಿಯಲ್‌ ಸ್ಟ್ರೀಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಬಾಗಲಗುಂಟೆ ನಿವಾಸಿ ಶ್ವೇತಾ ಗೌಡ (26) ಬಂಧಿತ ಆರೋಪಿ. ಈಕೆಯಿಂದ ಚಿನ್ನ ಹಾಗೂ ಕಾರು ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ವರ್ತೂರು ಪ್ರಕಾಶ್‌ ಅವರಿಗೂ ಪೊಲೀಸರು ನೋಟಿಸ್‌ ನೀಡಿದ್ದರೆ. ಅದಕ್ಕೆ ಪ್ರತಿಕ್ರಿಯೆ ನೀಡಿ ರುವ ವರ್ತೂರು ಪ್ರಕಾಶ್‌ ಅವರು ಸೋಮವಾರ ಠಾಣೆಗೆ ಹಾಜರಾಗುತ್ತೇನೆ ಎಂದು ಹೇಳಿದರು.

ಕಮರ್ಷಿಯಲ್‌ ಸ್ಟ್ರೀಟ್‌ನ ನವರತ್ನ ಜ್ಯುವೆಲ್ಲರ್ಸ್‌ ಮಾಲಿಕ ಸಂಜಯ್‌ ಬಾಫಾ° ಅವರಿಂದ ಸುಮಾರು 2.945 ಕೆ.ಜಿ. ಚಿನ್ನ ಪಡೆದು ವಂಚಿಸಿದ್ದ ಆರೋಪದಡಿ ಮೈಸೂರಿನಲ್ಲಿ ಆಕೆಯಯನ್ನು ಬಂಧಿಸಲಾಗಿದೆ. ಸಂಜಯ್‌ ಬಾಫಾ° ಅವರ ಮಳಿಗೆಗೆ ಬರುತ್ತಿದ್ದ ಮಹಿಳೆ, ಮಾಜಿ ಸಚಿವ ವರ್ತೂರು ಪ್ರಕಾಶ್‌ ಅವರ ಆಪೆ¤ ಎಂದು ಪರಿಚಯಿಸಿಕೊಂಡಿದ್ದಳು. ತಾನು ‘ಚಿನ್ನಾಭರಣ ವ್ಯಾಪಾರ ಆರಂಭಿಸುತ್ತಿದ್ದು, ನಿಮ್ಮಿಂದಲೇ ಆಭರಣ ಖರೀದಿಸುತ್ತೇನೆ’ ಎಂದಿದ್ದರು. ಅದಕ್ಕೆ ಸಂಜಯ್‌ ಒಪ್ಪಿದ್ದರು. ಆಭರಣಗಳನ್ನು ಮನೆಯವರಿಗೆ ತೋರಿಸಿಕೊಂಡು ಬರುವುದಾಗಿ ಅನುಮತಿ ಪಡೆದು ಮಹಿಳೆ ಆಭರಣಗಳನ್ನು ಮನೆಗೆ ಕೊಂಡೊಯ್ಯುತ್ತಿದ್ದರು. ಆ.26ರಿಂದ ಡಿ. 8ರ ವರೆಗಿನ ಅವಧಿಯಲ್ಲಿ ಆರೋಪಿ ಹೇಳಿದ್ದ ವಿಳಾಸಕ್ಕೆ ಆಭರಣ ಅಂಗಡಿ ಸಿಬ್ಬಂದಿ ಸುಮಾರು 2.42 ಕೋಟಿ ಮೌಲ್ಯದ 3 ಕೆ.ಜಿ. ಚಿನ್ನಾಭರಣಗಳನ್ನು ತಲುಪಿಸಿದ್ದರು. ಆದರೆ, ಶ್ವೇತಾ ಯಾವುದೇ ವ್ಯವಹಾರ ನಡೆಸಿರಲಿಲ್ಲ. ಹೀಗಾಗಿ ಅಂಗಡಿ ಮಾಲಿಕರು ಚಿನ್ನ ಮರಳಿಸಿ ಇಲ್ಲವೇ, ಹಣ ಪಾವತಿಸಿ ಎಂದು ಕೇಳಿದಾಗ ಬೆದರಿಕೆ ಹಾಕಿದ್ದಾಳೆ ಎಂದು ಸಂಜಯ್‌ ಬಾಫಾ° ದೂರಿನಲ್ಲಿ ಆರೋಪಿಸಿದ್ದರು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕಮರ್ಷಿಯಲ್‌ ಸ್ಟ್ರೀಟ್‌ ಪೊಲೀಸರು, ಕೋಲಾರ ಜಿಲ್ಲೆಯ ಬಿಜೆಪಿ ಮುಖಂಡರ ಕಾರಿನಲ್ಲಿ ಮೈಸೂರಿಗೆ ತೆರಳಿದ ಮಾಹಿತಿ ಮೇರೆಗೆ ಅಲ್ಲಿಗೆ ತೆರಳಿ ಶ್ವೇತಾ ಗೌಡಳನ್ನು ಬಂಧಿಸಲಾಗಿದೆ.

ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿ ಕೊಂಡಿದ್ದ ಶ್ವೇತಾ ಗೌಡ, ಈ ಮೊದಲು ಇದೇ ರೀತಿ ಚಿನ್ನದ ವ್ಯಾಪಾರಿಗೆ ಮೋಸ ಮಾಡಿದ್ದ ಆರೋಪ ದಡಿ ಯಲಹಂಕ ಠಾಣೆ ಪೊಲೀಸರು ಬಂಧಿಸಿ ದ್ದರು. ಡಾಲರ್ಸ್‌ ಕಾಲೊನಿಯಲ್ಲಿರುವ ಮಾಜಿ ಶಾಸಕ ವರ್ತೂರು ಪ್ರಕಾಶ್‌ ಅವರ ಮನೆ ವಿಳಾಸ ನೀಡಿ ಆರೋಪಿ 2 ಕೆ.ಜಿ. 945 ಗ್ರಾಂ ಚಿನ್ನ ಪಡೆ ದಿದ್ದಳು. ಆದ್ದರಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ವರ್ತೂರು ಪ್ರಕಾಶ್‌ ಅವರಿಗೆ ನೋಟಿಸ್‌ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಸಾಮಾಜಿಕ ಕಾರ್ಯಕರ್ತೆ ಎಂದು ಪರಿಚಯ ಮಾಡಿಕೊಂಡಿದ್ದ ಶ್ವೇತಾ: ವರ್ತೂರು ಪ್ರಕಾಶ್‌

ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ವರ್ತೂರು ಪ್ರಕಾಶ್‌, ಮೂರು ತಿಂಗಳ ಹಿಂದೆ ಸಾಮಾಜಿಕ ಕಾರ್ಯಕರ್ತೆ ಎಂದು ಪರಿಚಯಿಸಿಕೊಂಡಿದ್ದರು. ಆಮೇಲೆ ನನಗೆ ಅವರ ಸಂಪರ್ಕ ಇಲ್ಲ. ಆಕೆ ಒಡವೆ ಖರೀದಿಸಿರುವ ಮಾಹಿತಿ ಇಲ್ಲ. ಆಭರಣ ಅಂಗಡಿ ಮಾಲಿಕರೂ ನನಗೆ ತಿಳಿಸಿಲ್ಲ. ಆಕೆಯ ವ್ಯವಹಾರ, ಆಭರಣದ ಬಗ್ಗೆ ನನ್ನ ಬಳಿ ಏನೂ ಹೇಳಿಲ್ಲ. ದೂರು ನೀಡಿರುವ ವಿಚಾರ ಪೊಲೀಸರಿಂದ ಗೊತ್ತಾಗಿದೆ. ಸೋಮವಾರ ವಿಚಾರಣೆಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next