ಮಂಗಳೂರು:ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಶನಿವಾರ(ಜೂನ್ 4) ಚಿನ್ನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದು, ಪ್ರಯಾಣಿಕರೊಬ್ಬರಿಂದ 32 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
Advertisement
32,72,880 ಮೌಲ್ಯದ 624 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೆರೆಯ ಕೇರಳದ ಕಾಸರಗೋಡು ಮೂಲದ ಪ್ರಯಾಣಿಕ ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಬಂದಿದ್ದರು.
ಚೆಕ್-ಇನ್ ಬ್ಯಾಗೇಜ್‌ನ ತುಣುಕಾಗಿ ಸಾಗಿಸಲಾದ ಕಂದು ಬಣ್ಣದ ರಟ್ಟಿನ ಪೆಟ್ಟಿಗೆಯೊಳಗೆ ಚಿನ್ನವನ್ನು ಪುಡಿ ರೂಪದಲ್ಲಿ ಮರೆಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.