Advertisement

Kalaburagi; ಕರ್ನಾಟಕ ರಾಜ್ಯ ಪೊಲೀಸ್ ಗೆ ಸುವರ್ಣ ಮಹೋತ್ಸವ: ಮ್ಯಾರಥಾನ್

08:13 AM Mar 10, 2024 | Team Udayavani |

ಕಲಬುರಗಿ: ಕರ್ನಾಟಕ ರಾಜ್ಯ ಪೊಲೀಸ್ ಗೆ ಸುವರ್ಣ ಮಹೋತ್ಸವ ಅಂಗವಾಗಿ ನಗರದಲ್ಲಿಂದು 5 ಕೀ. ಮೀ ಉದ್ದದ ಮ್ಯಾರಥಾನ್ ಹಮ್ಮಿಕೊಳ್ಳಲಾಗಿತ್ತು.

Advertisement

ನಗರದ ಐವಾನ್ ಇ ಶಾಹಿ ಅತಿಥಿ ಗೃಹದಿಂದ ಆರಂಭಗೊಂಡ ಮ್ಯಾರಥಾನ್ ಗೆ ಕಲಬುರಗಿ ಮಹಾನಗರ ಪೊಲೀಸ್ ಆಯುಕ್ತ ಆರ್ ಚೇತನ್, ಕಲಬುರಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಹಾಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವ ಅಂಗವಾಗಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದ್ದು, ಡ್ರಗ್ಸ್ ಸೇವನೆ ತಡೆ ಹಾಗೂ ದುಷ್ಪರಿಣಾಮ ಕುರಿತಾದ ಜಾಗೃತಿಯು ಮ್ಯಾರಥಾನ್ ಉದ್ದೇಶವಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.

‌ಹಿರಿಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next