Advertisement

ಜಿಲ್ಲೆ ಜಿಲ್ಲೆಗಳಲ್ಲೂ ಸುವರ್ಣ ಕರ್ನಾಟಕ ಸಂಭ್ರಮ: ತಂಗಡಗಿ

01:09 AM Jun 22, 2024 | Team Udayavani |

ಬೆಂಗಳೂರು: ಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳ ಜತೆಗೆ ಪ್ರತೀ ಜಿಲ್ಲೆಯಲ್ಲಿ ಕಾರ್ಯಕ್ರಮ ಆಯೋಜನೆಗೆ ಸರಕಾರ ನಿರ್ಧರಿಸಿದ್ದು, ಇದಕ್ಕಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಡಿ ಬರುವ ಎಲ್ಲ ಅಕಾಡೆಮಿ ಹಾಗೂ ಪ್ರಾಧಿಕಾರಗಳನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸಲು ಉದ್ದೇಶಿಸಿದೆ.

Advertisement

ಬೆಂಗಳೂರು ಅಥವಾ ಗಡಿಭಾಗಗಳಿಗೆ ಕನ್ನಡದ ಕಾರ್ಯಕ್ರಮಗಳು ಸೀಮಿತವಾಗದೆ ಪ್ರತೀ ಜಿಲ್ಲೆಗೊಂದು ಕಾರ್ಯ ಕ್ರಮ ಮಾಡುವ ಮೂಲಕ ಸುವರ್ಣ ಕರ್ನಾಟಕ ಸಂಭ್ರಮ ಪಸರಿಸಲಿ ಎಂಬ ದೃಷ್ಟಿಯಿಂದ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸಲಾಗುವುದು. ಅದು ಕಾರ್ಯ ಕ್ರಮ ರೂಪುರೇಷೆ ಮತ್ತಿತರ ಸಲಹೆ ಗಳನ್ನು ನೀಡಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ತಿಳಿಸಿದರು.

ವಿಧಾನಸೌಧದಲ್ಲಿ ಶುಕ್ರವಾರ 14 ಅಕಾಡೆಮಿ ಮತ್ತು 4 ಪ್ರಾಧಿಕಾರ ಗಳಿಗೆ ನೇಮಕಗೊಂಡ ಅಧ್ಯಕ್ಷರು ಹಾಗೂ ಸದಸ್ಯರ ಜತೆ ಮೊದಲ ಬಾರಿಗೆ ಸಭೆ ನಡೆಸಿದ ಬಳಿಕ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸಚಿವ ತಂಗಡಗಿ, ಅಕಾಡೆಮಿಗಳಿಗೆ ಅಗತ್ಯ ಅನುದಾನ ನೀಡಲಾಗಿದೆ. ಬಾಕಿ ಅನುದಾನವನ್ನೂ ಒದಗಿಸಲಾಗು ವುದು. ಇವೆಲ್ಲವನ್ನೂ ಒಳಗೊಂಡು ಕಾರ್ಯಕ್ರಮಗಳಿಗೆ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ನೂತನ ಅಕಾ ಡೆಮಿಗಳ ಅಧ್ಯಕ್ಷರಿಗೆ ಸೂಚನೆ ನೀಡ ಲಾಗಿದೆ ಎಂದರು.

ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆಯಲ್ಲಿ ಪ್ರಾಧಿಕಾರ ಮತ್ತು ಅಕಾಡೆಮಿಗಳು ರಾಜಿಯಾಗದೆ ಕೆಲಸ ಮಾಡಬೇಕು ಎಂಬುದು ನಮ್ಮ ಆಶಯ. ಒಟ್ಟಾರೆ ಎಲ್ಲ ಅಕಾಡೆಮಿಗಳು ಚುರು ಕಾಗಿ ಕೆಲಸ ಮಾಡಬೇಕೆಂದು ಸೂಚಿಸಲಾಗಿದೆ. ಪ್ರತೀ ತಿಂಗಳು ಎರಡು ಅಕಾಡೆಮಿಗಳ ಕಾರ್ಯ ಪ್ರಗತಿ ಪರಿ ಶೀಲನೆ ಸಭೆ ನಡೆಸಲಾಗುತ್ತದೆ. ಅಲ್ಲದೆ ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಾಮಾಜಿಕ ನ್ಯಾಯ ಪಾಲನೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮುಕ್ತವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಹಿಂದೆ ಘೋಷಿಸಿದವರಿಗೂ ಪ್ರಶಸ್ತಿ
ಹಿಂದಿನ ಸರಕಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ನೀಡಲಾಗುವ ವಿವಿಧ ಪ್ರಶಸ್ತಿಗಳನ್ನೇ ನೀಡಿರಲಿಲ್ಲ. ಘೋಷಣೆ ಮಾಡಿದವರಿಗೂ ಪ್ರಶಸ್ತಿ ಪ್ರದಾನ ಮಾಡಿರಲಿಲ್ಲ. ನಾನು ಸಚಿವನಾದ ಬಳಿಕ ಹಿಂದಿನ ಸರಕಾರ ಘೋಷಣೆ ಮಾಡಿದವರಿಗೂ ಯಾವುದೇ ಬದಲಾವಣೆ ಮಾಡದೆ ಪ್ರಶಸ್ತಿ ಪ್ರದಾನ ಮಾಡಿದ್ದೇನೆ. ಇದು ನಮ್ಮ ಸಾಂಸ್ಕೃತಿಕ ಬದ್ಧತೆಯನ್ನು ತೋರಿಸುತ್ತದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Advertisement

ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳವಣಿಗೆಯಲ್ಲಿ ಪ್ರಾಧಿಕಾರ ಮತ್ತು ಅಕಾಡೆಮಿಗಳು ರಾಜಿಯಾಗದೆ ಕೆಲಸ ಮಾಡಬೇಕು ಎಂಬುದು ನಮ್ಮ ಆಶಯ. ಒಟ್ಟಾರೆ ಎಲ್ಲ ಅಕಾಡೆಮಿಗಳು ಚುರುಕಾಗಿ ಕೆಲಸ ಮಾಡಬೇಕೆಂದು ನಿರ್ದೇಶಿ ಸಿರುವುದಾಗಿ ಹೇಳಿದರು. ಹಿಂದಿನ ಸರಕಾರದಲ್ಲಿ ಯಾವ ಸಚಿವರು ಕೂಡ ಈ ರೀತಿ ಸಭೆ ನಡೆಸಿಲ್ಲ. ಎರಡು ವರ್ಷಗಳ ಕಾಲ ಹಿಂದಿನ ಸರಕಾರದ ಅವಧಿಯಲ್ಲಿ ಯಾವುದೇ ಚಟುವಟಿಕೆ ನಡೆದಿಲ್ಲ. ನಮ್ಮ ಸರಕಾರ ಬಂದ ಬಳಿಕ ಚಟುವಟಿಕೆಗಳು ವೇಗ ಪಡೆದುಕೊಂಡಿವೆ ಎಂದರು.

ಸಚಿವರ ನಡೆಗೆ ಸಾಹಿತಿಗಳ ಶ್ಲಾಘನೆ
ಅಕಾಡೆಮಿ ಮತ್ತು ಪ್ರಾಧಿಕಾರಗಳ ನೂತನ ಅಧ್ಯಕ್ಷರು ಹಾಗೂ ಸದಸ್ಯರ ಸಭೆ ಕರೆದು ಅಭಿನಂದನೆ ಸಲ್ಲಿಸಿ ಸಮಾಲೋಚನ ಸಭೆ ನಡೆಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ನಡೆಗೆ ಸಾಹಿತಿಗಳು ಒಕ್ಕೂರಲಿನಿಂದ ಶ್ಲಾಘನೆ ವ್ಯಕ್ತಪಡಿಸಿದರು.

ಏನಿದು ಸುವರ್ಣ ಸಂಭ್ರಮಾಚರಣೆ?
-1973ರ ನ. 1ರಂದು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣವಾಗಿತ್ತು. 2023ರ ನವೆಂಬರ್‌ನಲ್ಲಿ ಅದಕ್ಕೆ 50 ವರ್ಷ ತುಂಬಿತ್ತು.
-ಈ ಹಿನ್ನೆಲೆಯಲ್ಲಿ 2023ರ ನವೆಂಬರ್‌ನಿಂದ 2024ರ ನವೆಂಬರ್‌ವರೆಗೆ ಒಂದು ವರ್ಷ ಕಾಲ ಸುವರ್ಣ ಸಂಭ್ರಮವನ್ನು ಹಮ್ಮಿಕೊಳ್ಳಲಾಗಿದೆ.
-ಈಗಾಗಲೇ ಏಳು ತಿಂಗಳು ಗಳಿಂದ ಕಾರ್ಯಕ್ರಮಗಳು ನಡೆ ಯುತ್ತಿವೆ. ಅದಕ್ಕೆ ಇನ್ನಷ್ಟು ಕಾರ್ಯ ಕ್ರಮಗಳು ಸೇರಿಕೊಳ್ಳಲಿವೆ.
-ಇದರ ಭಾಗವಾಗಿ ಗುರುವಾರ ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿಯ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ.

ಅಕಾಡೆಮಿಗಳಿಗೆ ಅಗತ್ಯ ಅನುದಾನ ನೀಡಲಾಗಿದೆ.ಬಾಕಿ ಉಳಿದಿರುವ ಅನುದಾನವನ್ನೂ ಒದಗಿಸಲಾಗುವುದು. ಇವೆಲ್ಲವನ್ನೂ ಒಳಗೊಂಡಂತೆ ಕಾರ್ಯಕ್ರಮಗಳಿಗೆ ಕ್ರಿಯಾಯೋಜನೆ ಸಿದ್ಧಪಡಿಸುವಂತೆ ನೂತನ ಅಕಾಡೆಮಿಗಳ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.
-ಶಿವರಾಜ್‌ ತಂಗಡಗಿ, ಕನ್ನಡ-ಸಂಸ್ಕೃತಿ ಸಚಿವ

Advertisement

Udayavani is now on Telegram. Click here to join our channel and stay updated with the latest news.

Next