Advertisement

ಗೋಲಿಬಾರ್‌: ಸಾಕ್ಷಿ, ಹೇಳಿಕೆಗೆ ಕೊನೇ ಅವಕಾಶ

12:13 AM Feb 04, 2020 | Lakshmi GovindaRaj |

ಮಂಗಳೂರು: ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಡಿ.19ರಂದು ನಡೆದ ಪ್ರತಿಭಟನೆಯ ಬಗ್ಗೆ ಮಾಹಿತಿಯುಳ್ಳ ಅಥವಾ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದವರು ಫೆ.6ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1ರ ತನಕ ಸಾಕ್ಷ ಅಥವಾ ಹೇಳಿಕೆ ನೀಡಲು ಅಂತಿಮ ಅವಕಾಶ ನೀಡಲಾಗಿದೆ. ಘಟನೆಯಲ್ಲಿ ಗುಂಡೇಟಿನಿಂದ ನೌಶಿನ್‌ ಮತ್ತು ಜಲೀಲ್‌ ಕುದ್ರೋಳಿ ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್‌ ವಿಚಾರಣೆ ನಡೆಸಲು ಉಡುಪಿ ಜಿಲ್ಲಾಧಿಕಾರಿಯವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Advertisement

ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದವರು ಯಾವುದೇ ಸಾಕ್ಷ್ಯ ಅಥವಾ ಹೇಳಿಕೆ ನೀಡಬಹುದು. ಸಹಾಯಕ ಆಯುಕ್ತರ ಕೋರ್ಟ್‌ ಹಾಲ್‌, ಮಿನಿ ವಿಧಾನಸೌಧ, ಮಂಗಳೂರು-ಇಲ್ಲಿಗೆ ಹಾಜರಾಗಿ ಹೇಳಿಕೆ ನೀಡಲು ಅವಕಾಶವಿದೆ. ನಂತರ ಸಾರ್ವಜನಿಕರಿಂದ ಯಾವುದೇ ಸಾಕ್ಷ್ಯ ಅಥವಾ ಹೇಳಿಕೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next