Advertisement

Muda ಅಕ್ರಮದಲ್ಲಿ ಗೋಲ್ಮಾಲ್‌ ಸಿಎಂ: ಆರ್‌. ಅಶೋಕ್‌ ಆರೋಪ

11:34 PM Jul 02, 2024 | Team Udayavani |

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿರುವ ಹಗರಣದ ಸ‌ಂಬಂಧ “ಗೋಲ್ಮಾಲ್‌ ಸಿಎಂ’ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ.

Advertisement

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ 7 ಪ್ರಶ್ನೆ ಕೇಳಿರುವ ಅಶೋಕ್‌, ಗೋಲ್ಮಾಲ್‌ ಸಿಎಂ-400 ಕೋಟಿ ರೂಪಾಯಿ ಗುಳುಂ ಎಂದು ವ್ಯಂಗ್ಯವಾಡಿದ್ದಾರೆ.

1. ಗೋಲ್ಮಾಲ್‌ ಸಿಎಂ ಸಿದ್ದರಾಮಯ್ಯನವರೇ, ತಮ್ಮ ಧರ್ಮಪತ್ನಿಯ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಇದನ್ನು ಹೇಗೆ ಸಮರ್ಥನೆ ಮಾಡಿಕೊಳ್ಳುತ್ತೀರಿ?
2. ಮುಡಾ ಅಧಿಕಾರಿಗಳನ್ನು ಅಮಾನತು ಮಾಡದೆ, ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಿಸಲು ಹೊರಟಿದ್ದೀರಿ?
3. 4,000 ಕೋಟಿ ರೂ. ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನು ನಿಜಕ್ಕೂ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು. ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ನೇಮಿಸಿ ಪ್ರಕರಣವನ್ನು ಮುಚ್ಚಿಹಾಕಲು ಹೊರಟಿದ್ದೀರಲ್ಲ ಈ ಹಗರಣದಲ್ಲಿ ತಮ್ಮ ಪಾಲೆಷ್ಟು?
4. 50:50 ಅನುಪಾತ ಹಂಚಿಕೆಗೆ ಅನುಮತಿ ನೀಡಿದ್ದು ಯಾರು?
5. ಪರ್ಯಾಯ ನಿವೇಶನ ನೀಡುವಾಗ ಅದೇ ಬಡಾವಣೆ ಬಿಟ್ಟು ಲಾಭದ ಬಡಾವಣೆಗಳಲ್ಲಿ ಅವಕಾಶಕ್ಕೆ ಶಿಫಾರಸು ಮಾಡಿದ್ದು ಯಾರು?
6. ಸಚಿವ ಸಂಪುಟದ ಅನುಮತಿ ಪಡೆಯದೆ ನಿವೇಶನ ನೀಡಲು ಅನುಮತಿಸಿದ್ದು ಯಾರು?
7. ನಿಮ್ಮ ತವರು ಜಿಲ್ಲೆ ಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದೊಂದು ಬೃಹತ್‌ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ? ಗೋಲ್ಮಾಲ್‌ ಸಿಎಂ ಸಿದ್ದರಾಮಯ್ಯನವರೇ ಇದಕ್ಕೆ ಉತ್ತರಿಸುವಿರಾ? ಎಂದು ಅಶೋಕ್‌ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next