ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಗುರುವಾರ(ಡಿ.19) ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಂವಿಧಾನ ಕುರಿತ ಚರ್ಚೆಯಲ್ಲಿ ಭಾಗಿಯಾಗಿ ರಾಜ್ಯಸಭೆಯಲ್ಲಿ ಮಾತನಾಡುವ ವೇಳೆ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಅವಮಾನಿಸಲಾಗಿದೆ ಎಂದು ಎಲ್ಲೆಡೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿರುವ ಬೆನ್ನಲೇ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪ್ರತಿಕ್ರಿಯೆ ನೀಡಿದ್ದು ಅಮಿತ್ ಶಾ ಅವರಿಗೆ ಹುಚ್ಚು ಹಿಡಿದಿದೆ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡುವುದು ಒಳಿತು ಇಲ್ಲವೇ ಅಂಬೇಡ್ಕರ್ ಮೇಲೆ ದ್ವೇಷ ಇರಬೇಕು ಹಾಗಾಗಿ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಅಮಿತ್ ಶಾ ಹೇಳಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ‘ಇತ್ತೀಚಿನ ದಿನಗಳಲ್ಲಿ ಅಂಬೇಡ್ಕರ್ ಎನ್ನುವುದು ಕೆಲವರಿಗೆ ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ್ ಬದಲು ದೇವರ ನಾಮಸ್ಮರಣೆ ಮಾಡಿದರೆ ಏಳೆಂಟು ಜನ್ಮ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ಹೇಳಿರುವ ವಿಡಿಯೋ ವೈರಲ್ ಆಗುತ್ತಿದ್ದು ಇದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಆದರೆ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಅಮಿತ್ ಶಾ ನನ್ನ ಹೇಳಿಕೆಯನ್ನು ತಿರುಚಿ ಅಪ್ ಲೋಡ್ ಮಾಡಲಾಗಿದೆ ಅಂಬೇಡ್ಕರ್ ಅವಮಾನಿಸುವ ಯಾವುದೇ ಹೇಳಿಕೆಯನ್ನು ನಾನು ನೀಡಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು