Advertisement
ಚರ್ಚಿನ ಧರ್ಮಗುರು ಅನಿಲ್ ಪ್ರಕಾಶ್ ಡಿ ಸಿಲ್ವಾ , ಸಹಾಯಕ ಧರ್ಮಗುರು ಜೆರಾಲ್ಡ… ಸಂದೀಪ್ ನೇತೃತ್ವದಲ್ಲಿ ಐಸಿವೈಎಂ ಸಂಘಟನೆಯ ಸಹಭಾಗಿತ್ವದೊಂದಿಗೆ ಯುವಕರು ಮತ್ತು ಇತರರು ಸೇರಿ ಒಟ್ಟು 50 ಮಂದಿ ಕಲಾವಿದರು ಯೇಸು ಕ್ರಿಸ್ತರು ಮರಣದಂಡನೆಗೆ ಗುರಿಯಾಗುವಲ್ಲಿಂದ ಆರಂಭಿಸಿ ಶಿಲುಬೆ ಹೊತ್ತು ಕಲ್ವಾರಿ ಬೆಟ್ಟಕ್ಕೆಸಾಗಿ ಅಲ್ಲಿ ಶಿಲುಬೆಗೆ ಏರಿ ಮರಣವನ್ನಪ್ಪುವ ಘಟನೆಗಳನ್ನು 14 ಭಾಗಗಳಾಗಿ ವಿಂಗಡಿಸಿ ಪ್ರತಿಯೊಂದು ಭಾಗವನ್ನು ಅವಲೋಕಿಸಿ ಪ್ರಾರ್ಥಿಸುತ್ತಾ ಸಾಗುವ ಶಿಲುಬೆಯ ಹಾದಿಯ ಪ್ರಕ್ರಿಯೆಯನ್ನು ನಟನೆಯ ಮೂಲಕ ಚರ್ಚಿನ ಮೈದಾನದಲ್ಲಿ ನಡೆಸಿಕೊಟ್ಟರು.
ಸುಮಾರು 350 ಕ್ಕೂ ಅಧಿಕ ಭಕ್ತಾದಿಗಳು ಉರಿ ಬಿಸಿಲಿನ ದಣಿವಿನ ಅರಿವಿಲ್ಲದೆ ಭಕ್ತಿ ಕಾರ್ಯಕ್ರಮದಲ್ಲಿ
ಪಾಲ್ಗೊಂಡರು.