Advertisement

“ಮಾರ್ಗದರ್ಶನದಿಂದ ಉತ್ತಮ ಭವಿಷ್ಯ’

05:56 PM Apr 05, 2019 | Sriram |

ಕಾರ್ಕಳ: ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಜ್ಞಾನವೃದ್ಧಿಸುವ ದೃಷ್ಟಿಯಿಂದ ಶೈಕ್ಷಣಿಕ ಸಂಸ್ಥೆಗಳು ವಿವಿಧ ಕಂಪೆನಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಇದರಿಂದ ವಿದ್ಯಾರ್ಥಿಗಳಿಗೆ ತರಗತಿ ಮುಗಿದು ಉದ್ಯೋಗಕ್ಕೆ ಸುಲಭವಾಗಿ ಸೇರಬಹುದೆಂದು ನಿಟ್ಟೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್‌. ವಿನಯ ಹೆಗ್ಡೆ ಹೇಳಿದರು.


Advertisement

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್‌ ವಿಭಾಗದ ಅಟೊಮೋಟಿವ್‌ ಲರ್ನಿಂಗ್‌ ಫ್ಯಾಕ್ಟರಿಯನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ದೆಸೆಯಲ್ಲಿ ಮನಸ್ಸು ಹೊಸ ವಿಷಯವನ್ನು ಕಲಿಯಲು ಹಾತೊರೆಯುತ್ತಿರುತ್ತದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸರಿಯಾದ ಮಾರ್ಗದರ್ಶನದೊಂದಿಗೆ ಮುಂದುವರಿದು ಯಶಸ್ಸು ಕಾಣಬೇಕೆಂದು ಅವರು ವಿದ್ಯಾರ್ಥಿಗಳಿಗೆ ಹೇಳಿದರು.

ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಪೊ›-ಚಾನ್ಸೆಲರ್‌ ವಿಶಾಲ್‌ ಹೆಗ್ಡೆ, ಪೊ›-ವೈಸ್‌ ಚಾನ್ಸೆಲರ್‌ ಡಾ| ಎಂ.ಎಸ್‌. ಮೂಡಿತ್ತಾಯ, ಫಿನಾನ್ಸ್‌ ವಿಭಾಗದ ನಿರ್ದೇಶಕ ರಾಜೇಂದ್ರ ಎಂ., ಹೆಚ್‌ಸಿಎಲ್‌ ಕಂಪೆನಿಯ ಜಪಾನ್‌ ವಿಭಾಗದ ಮಾಜಿ ಅಧ್ಯಕ್ಷ ಹರಿಕೃಷ್ಣ ಭಟ್‌, ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ನಿರಂಜನ್‌ ಎನ್‌. ಚಿಪ್ಳೂಣRರ್‌, ಉಪಪ್ರಾಂಶುಪಾಲ ಡಾ| ಐ. ರಮೇಶ್‌ ಮಿತ್ತಂತಾಯ, ಡಾ| ಶ್ರೀನಿವಾಸ ರಾವ್‌ ಬಿ.ಆರ್‌., ಇಂಡಸ್ಟ್ರಿ ಇನ್ಸ್ಟಿಟ್ಯೂಟ್‌ ಕೊಲಾಬೊರೇಶನ್‌ ವಿಭಾಗದ ನಿರ್ದೇಶಕ ಡಾ| ಪರಮೇಶ್ವರನ್‌ ಉಪಸ್ಥಿತರಿದ್ದರು.

ಮೆಕ್ಯಾನಿಕಲ್‌ ವಿಭಾಗದ ವತಿಯಿಂದ ವಿದ್ಯಾರ್ಥಿಗಳ ಮಿನಿ ಪ್ರಾಜೆಕ್ಟ್ ಪ್ರದರ್ಶನ ಇದೇ ಸಂದರ್ಭದಲ್ಲಿ ನಡೆಯಿತು. ಕಾರ್ಯಕ್ರಮದ ಸಂಯೋಜಕ ಗ್ರೆçನಲ್‌ ಅಟೋಮೋಟಿವ್‌ ಲ್ಯಾಬ್‌ನ ಕಾರ್ಯವೈಖರಿಯ ವಿವರಿಸಿದರು.

Advertisement

ಮೆಕ್ಯಾನಿಕಲ್‌ ವಿಭಾಗದ ಮುಖ್ಯಸ್ಥ ಡಾ| ಶಶಿಕಾಂತ ಕರಿಂಕ ಸ್ವಾಗತಿಸಿ, ಸಹಪ್ರಾಧ್ಯಾಪಕಿ ರಶ್ಮಿ ಶೆಟ್ಟಿ ನಿರೂಪಿಸಿದರು. ಸಹಪ್ರಾಧ್ಯಾಪಕ ಕೃಷ್ಣಪ್ರಸಾದ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next