ಉಳ್ಳಾಲ: ಸಸ್ಯ ಸಂಪತ್ತುಗಳನ್ನು ರಕ್ಷಿಸುವುದರಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಜುಲೈ ಹಸಿರಿನ ತಿಂಗಳು. ಚಳಿಗೆ ಮುರುಟಿದ ಬೀಜಗಳು ಮೊಳಕೆ ಒಡೆಯುವ ಸಮಯ. ಸಸ್ಯಗಳನ್ನು ಪೋಷಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಯ್ಯದ್ ಮದನಿ ಚಾರಿಟೆಬಲ್ ಟ್ರಸ್ಟ್ ಉಪಾಧ್ಯಕ್ಷ ಮುಸ್ತಫಾ ಹೇಳಿದರು.
ಅವರು ಕೋಟೆಪುರ ಅನುದಾನಿತ ಟಿಪ್ಪು ಸುಲ್ತಾನ್ ಶಿಕ್ಷಣ ಸಂಸ್ಥೆ ಅಯೋಜಿಸಿದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಟ್ರಸ್ಟ್ ಜತೆ ಕಾರ್ಯದರ್ಶಿ ಎ.ಕೆ ಮೊಹಿಯುದ್ದೀನ್ ಅಧ್ಯಕ್ಷತೆ ವಹಿಸಿದರು.ಕೋಟೆಪುರ ಜುಮಾ ಮಸೀದಿ ಅಧ್ಯಕ್ಷ ಬಾವಾ ಇಸ್ಮಾಯಿಲ್, ಸಯ್ಯದ್ ಮದನಿ ಚಾರಿಟೆಬಲ್ ಟ್ರಸ್ಟ್ ಉಪಾಧ್ಯಕ್ಷ ಮುಸ್ತಫಾ ಅಬ್ದುಲ್ಲ, ಆಡಳಿತಾಧಿಕಾರಿ ಅಬ್ದುಲ್ ಲತೀಫ್ ವೇದಿಕೆಯಲ್ಲಿದ್ದರು. ಪರಿಸರ ಪ್ರೇಮಿ ಕೃಷ್ಣಪ್ಪ ಕೊಂಚಾಡಿ ಅವರು ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಂದ ಪರಿಸರಕ್ಕೆ ಸಂಬಂಧ ಪಟ್ಟ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭ ಶಾಲಾ ಆವರಣದಲ್ಲಿ ಹಲಸಿನ ಗಿಡಗಳನ್ನು ನೆಡಲಾಯಿತು. ಮುಖ್ಯ ಗುರು ಎಂ. ಎಚ್. ಮಲಾರ್ ಸ್ವಾಗತಿಸಿದರು. ವಿದ್ಯಾರ್ಥಿನಿ ಗಳಾದ ಫಾತಿಮ ಶಾಹಿಮ ಮತ್ತು ಜಶೀಲಾ ಅವರು ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಸಂಸತ್ತಿನ ಕಾರ್ಯದರ್ಶಿ ಮರಿಯಮ್ಮ ಸುಫೈದ ವಂದಿಸಿದರು.