Advertisement
ಸಭಾಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಮಾತನಾಡಿ, ತುಳು ನಾಟಕಗಳ ಮೂಲಕ ಕೇವಲ ಮನೋರಂಜನೆ ಮಾತ್ರವಲ್ಲ ಸಮಾಜಕ್ಕೆ ಉತ್ತಮ ಸಂದೇಶಗಳು ದೊರೆಯುತ್ತವೆ. ತುಳು ರಂಗಭೂಮಿಯನ್ನು ಉಳಿಸಲು ಶ್ರಮಿಸುತ್ತಿರುವ ಕಲಾವಿದರನ್ನು ನಾವು ಪ್ರೋತ್ಸಾಹಿಸಬೇಕಾಗಿದೆ. ಅದೇ ರೀತಿ ಯಕ್ಷಗಾನ ಹಾಗೂ ತುಳು ನಾಟಕಗಳನ್ನು ಊರಿನಿಂದ ಕರೆಸಿ ಮುಂಬಯಿ-ಪುಣೆಗಳಲ್ಲಿ ಪ್ರದರ್ಶಿಸುವ ಹೊಣೆ ಗಾರಿಕೆಯನ್ನು ಕರ್ನೂರು ಮೋಹನ್ ರೈಹಾಗೂ ಅಜೆಕಾರು ಬಾಲಕೃಷ್ಣ ಶೆಟ್ಟಿಯವರು ವಹಿಸಿಕೊಂಡು ನಿಸ್ವಾರ್ಥ ಕಲಾಸೇವೆಯನ್ನು ಮಾಡುತ್ತಿರುವುದು ಅಭಿನಂದನೀಯವಾಗಿದೆ. ಭಾಷೆ ಹಾಗೂ ಕಲೆಯನ್ನು ಉಳಿಸುವಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡಿರುವ ಕಲಾವಿದರಿಗೆ ಹಾಗೂ ಸಂಘಟಕರಿಗೆ ಶಕ್ತಿಯನ್ನು ತುಂಬುವ ಕಾರ್ಯ ನಾವು ಮಾಡಬೇಕಾಗಿದೆ ಎಂದರು.
Related Articles
Advertisement
ಲಕುಮಿ ತಂಡದ ಮುಂಬಯಿ ಸಂಚಾಲಕ ಕರ್ನೂರು ಮೋಹನ್ ರೈ ಅವರು ಮಾತನಾಡಿ, ಕಳೆದ 24 ವರ್ಷಗಳಿಂದ ನಾಟಕ ತಂಡಗಳನ್ನು ಊರಿನಿಂದ ಕರೆತಂದು ಮುಂಬಯಿ ಪುಣೆಗಳಲ್ಲಿ ಪ್ರದರ್ಶನಗಳನ್ನು ಏರ್ಪಡಿಸುವ ಕಾಯಕವನ್ನು ಮಾಡುತ್ತಾ ಬಂದಿದ್ದೇನೆ. ಪ್ರತಿ ಸಂದರ್ಭದಲ್ಲೂ ಪುಣೆಯ ಕಲಾಪೋಷಕರು, ಕಲಾಭಿಮಾನಿಗಳು ನನಗೆ ಪ್ರೋತ್ಸಾಹ ನೀಡುತ್ತಾ ಬಂದಿರುತ್ತಾರೆ. ಅದೇ ರೀತಿ ಇಂದಿನ ನಾಟಕಕ್ಕೂ ತುಂಬು ಹೃದಯದಿಂದ ಅಭಿಮಾನದಿಂದ ಸಹಕಾರ ನೀಡಿದ್ದಾರೆ. ಅವರೆಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದೆಯೂ ನಿಮ್ಮೆಲ್ಲರ ಪ್ರೋತ್ಸಾಹ, ಸಹಕಾರ ನಿರಂತರವಾಗಿರಲಿ
ಎಂದರು.
ವೇದಿಕೆಯಲ್ಲಿ ಪಿಂಪ್ರಿ-ಚಿಂಚಾಡ್ ಬಂಟರ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಪುಣೆ ಕನ್ನಡ ಸಂಘದ ಉಪಾಧ್ಯಕ್ಷೆ ಇಂದಿರಾ ಸಾಲ್ಯಾನ್, ಪುಣೆ ಬಂಟರ ಸಂಘದ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಕೋಶಾಧಿಕಾರಿ ವೈ. ಚಂದ್ರಹಾಸ ಶೆಟ್ಟಿ, ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುಲತಾ ಎಸ್. ಶೆಟ್ಟಿ, ಪಿಂಪ್ರಿ-ಚಿಂಚ್ವಾಡ್ ಡ್ ಹೊಟೇಲ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಶ್ರೀ ಗುರುದೇವಾ ಸೇವಾ ಬಳಗದ ಕಾರ್ಯದರ್ಶಿ ರೋಹಿತ್ ಡಿ. ಶೆಟ್ಟಿ ನಗ್ರಿಗುತ್ತು, ಪಿಂಪ್ರಿ-ಚಿಂಚಾÌಡ್ ಬಂಟರ ಸಂಘದ ಕೋಶಾಧಿಕಾರಿ ಪೆಲತ್ತೂರು ಸುಧಾಕರ ಶೆಟ್ಟಿ ಉಪಸ್ಥಿತರಿದ್ದರು.
ಅತಿಥಿಗಳನ್ನು ಹಾಗೂ ಕಲಾವಿದ ಅರವಿಂದ ಬೋಳಾರ್ ಇವರನ್ನು ಮುಂಬಯಿ ಸಂಚಾಲಕರಾದ ಕರ್ನೂರು ಮೋಹನ್ ರೈ ಹಾಗೂ ಅಜೆಕಾರು ಬಾಲಕೃಷ್ಣ ಶೆಟ್ಟಿಯವರು ಗೌರವಿಸಿದರು. ವಿಶೇಷ ಸಹಕಾರ ನೀಡಿದ ಕಲಾಭಿಮಾನಿಗಳನ್ನು ಸತ್ಕರಿಸಲಾಯಿತು. ಪತ್ರಕರ್ತ ಕಿರಣ್ ಬಿ. ರೈ ಕರ್ನೂರು ಕಾರ್ಯಕ್ರಮ ನಿರೂಪಿಸಿದರು. ಅನಂತರ ನಾಟಕ ಪ್ರದರ್ಶನ ಮುಂದುವರಿಯಿತು. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
-ಚಿತ್ರ-ವರದಿ: ಕಿರಣ್ ಬಿ. ರೈ ಕರ್ನೂರು