ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (KERC) ವಿದ್ಯುತ್ ದರ ಪರಿಷ್ಕರಣೆ ಮಾಡಿ ಬುಧವಾರ (ಫೆ.28) ಆದೇಶ ಹೊರಡಿಸುವ ಮೂಲಕ ರಾಜ್ಯದ ವಿದ್ಯುತ್ ಬಳಕೆದಾರರಿಗೆ ಸಂತಸದ ಸುದ್ದಿ ನೀಡಿದೆ.
ಇದನ್ನೂ ಓದಿ:Dharamsala Test ; ಕೆ.ಎಲ್.ರಾಹುಲ್ ಆಡುವ ಸಾಧ್ಯತೆ ವಿರಳ: ಬುಮ್ರಾ ತಂಡಕ್ಕೆ
ರಾಜ್ಯದಲ್ಲಿ 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸುವ ಗ್ರಾಹಕರಿಗೆ ಪ್ರತಿ ಯೂನಿಟ್ ಮೇಲೆ 1.10 ರೂಪಾಯಿ ಇಳಿಕೆ ಮಾಡಲಾಗಿದೆ. ಅದೇ ರೀತಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಕಡಿತ ಮಾಡಲಾಗಿದೆ.
ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಪ್ರತಿ ಯೂನಿಟ್ ಗೆ 40 ಪೈಸೆ ಇಳಿಕೆ, ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಕಡಿತ ಮಾಡಲಾಗಿದ್ದು, ಹೊಸ ದರ ಮಾರ್ಚ್ 1ರಿಂದ ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವಸತಿ ಅಪಾರ್ಟ್ ಮೆಂಟ್ ಗಳಿಗೆ ಪ್ರತಿ ಕೆವಿಎಗೆ 10 ರೂಪಾಯಿ ಇಳಿಕೆ ಮಾಡಲಾಗಿದ್ದು, ಕೈಗಾರಿಕಾ ಘಟಕಗಳ ವಿದ್ಯುತ್ ಯೂನಿಟ್ ಗೆ ಒಂದು ರೂಪಾಯಿ ಕಡಿತ ಮಾಡಲಾಗಿದೆ.