Advertisement

ಕೋವಿಡ್-19 ಲಾಕ್ ಡೌನ್ ನಡುವೆ ಮೀನುಗಾರರಿಗೆ ಸಂತಸದ ಸುದ್ದಿ

09:12 AM Apr 12, 2020 | keerthan |

ಬೆಂಗಳೂರು: ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಹೇರಲಾಗಿದೆ. ಲಾಕ್ ಡೌನ್ ಕಾರಣದಿಂದ ಮೀನುಗಾರರಿಗೂ ಮೀನುಗಾರಿಕೆ ನಡೆಸಲು ನಿರ್ಬಂಧ ಹೇರಲಾಗಿದ್ದು, ಇದೀಗ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡಿದೆ.

Advertisement

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜೊತೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ಬಗ್ಗೆ ಮಾತನಾಡಿದರು.

ಮೀನುಗಾರಿಕೆ ಮತ್ತು ಮೀನು ಸಂಸ್ಕರಣಾ ಚಟುವಟಿಕೆಗಳಿಗೆ ಏಪ್ರಿಲ್ 10ರಂದು ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಇದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮೀನುಗಾರರಿಗೆ ಅನುಕೂಲವಾಗಲಿದೆ ಎಂದು ಬಿಎಸ್ ವೈ ಹೇಳಿದರು.

ಮೀನುಗಾರಿಕೆಗೆ ನಿರ್ಬಂಧ ಇರುವ ಕಾರಣ ಕರಾವಳಿ ಜಿಲ್ಲೆಗಳ ಮೀನುಗಾರರು ಬಹಳಷ್ಟು ನಷ್ಟ ಅನುಭವಿಸಿದ್ದರು. ಜೂನ್ ನಂತರ ಮಳೆಗಾಲ ಆರಂಭವಾಗುವ ಕಾರಣ ನಂತರ ಎರಡು- ಮೂರು ತಿಂಗಳು ಕಡಲಿಗೆ ಇಳಿಯಲಾಗುವುದಿಲ್ಲ. ಹೀಗಾಗಿ ಈಗ ಮೀನುಗಾರಿಕೆಯ ಮೇಲಿದ್ದ ಲಾಕ್ ಡೌನ್ ತೆರವುಗೊಳಿಸಿರುವುದು ಕಡಲ ಮಕ್ಕಳ ಸಂತಸಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next