Advertisement
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.38.75ರಿಂದ ಶೇ.42.5ಕ್ಕೆ ಪರಿಷ್ಕರಿಸಿ ಅಂದರೆ ಶೇ.3.75ರಷ್ಟು ಹೆಚ್ಚಳ ಮಾಡಿ ಆದೇಶಿಸಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಲತಾಣ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
Related Articles
Advertisement
ಯುಜಿಸಿ, ಎಐಸಿಟಿಇ, ಐಸಿಎಆರ್ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ವೇತನ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
5.20 ಲಕ್ಷ ಸರ್ಕಾರಿ ನೌಕರರಿಗೆ ಅನುಕೂಲರಾಜ್ಯ ಸರ್ಕಾರಿ ನೌಕರರಿಗೆ ಶೇ.3.75 ರಷ್ಟು ತುಟ್ಟಿಭತ್ಯೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ರಾಜ್ಯ ಸರ್ಕಾರಿ ನೌಕರರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಘದ ಮನವಿಗೆ ಸರ್ಕಾರ ಸ್ಪಂದಿಸಿದೆ. ಸರ್ಕಾರದ ಈ ಆದೇಶದಿಂದಾಗಿ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 5.20ಲಕ್ಷ ಸರ್ಕಾರಿ ನೌಕರರಿಗೆ, ನಿಗಮ- ಮಂಡಳಿ-ಅನುದಾನಿತ ಸಂಸ್ಥೆಗಳ ಸುಮಾರು 3 ಲಕ್ಷ ನೌಕರರು, ಸುಮಾರು 4.5 ಲಕ್ಷ ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ ಎಂದಿದ್ದಾರೆ.