ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ತರಗತಿ ಬಹಿಷ್ಕರಿಸಿ ಹೋರಾಟ ನಡೆಸುತ್ತಿರುವ ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರಕಾರವು ಸಂಕ್ರಾಂತಿಗೆ ಸಿಹಿ ನೀಡುವ ಸಾಧ್ಯತೆಗಳಿವೆ.
ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ಮಂಗಳವಾರ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್. ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಮೂರು ಗಂಟೆಗಳ ಸಭೆ ನಡೆಸಿ ಚರ್ಚಿಸಿದ್ದಾರೆ.
ಇದನ್ನೂ ಓದಿ:ನಾನು ಭಂಡತನ ಪ್ರದರ್ಶನ ಮಾಡಿಲ್ಲ, ಕ್ಷಮೆ ಕೇಳಿದ್ದೇನೆ: ರೇಣುಕಾಚಾರ್ಯ
ಸಭೆಯಲ್ಲಿ ಕೇಳಿ ಬಂದಿರುವ ಸಲಹೆ ಸೂಚನೆಗಳನ್ನು ಮತ್ತೊಂದು ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಒಂದೆರಡು ದಿನಗಳಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದವರು ತಿಳಿಸಿದ್ದಾರೆ.