Advertisement

ಗುಡ್ ನ್ಯೂಸ್:ಮೋಟಾರು ವಾಹನಗಳ ಮೇಲಿನ ತೆರಿಗೆ ಶೇ.50ರಷ್ಟು ವಿನಾಯ್ತಿ

08:14 PM Jun 23, 2021 | Team Udayavani |

ಬೆಂಗಳೂರು : ಲಾಕ್ ಡೌನ್ ಸಂಕಷ್ಟದಲ್ಲಿದ್ದಂತಹ ರಾಜ್ಯದ ಪ್ರಯಾಣಿಕ ವಾಹನ ಮಾಲೀಕರಿಗೆ, ಸರ್ಕಾರ ಈಗಾಗಲೇ ತೆರಿಗೆ ಕಟ್ಟೋದಕ್ಕೆ ಅವಧಿಯನ್ನು ವಿಸ್ತರಣೆ ಮಾಡಿ ಗುಡ್ ನ್ಯೂಸ್ ನೀಡಿತ್ತು. ಇದೀಗ ಜೂನ್ 2021ರ ತಿಂಗಳಿನ ಮೋಟಾರು ವಾಹನಗಳ ಮೇಲಿನ ತೆರಿಗೆಯಲ್ಲಿ ಶೇ.50ರಷ್ಟು ವಿನಾಯ್ತಿ ನೀಡಿ, ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.

Advertisement

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು, ಕೋವಿಡ್-19 ರ 2ನೇ ಅಲೆಯ ಹಿನ್ನೆಲೆಯಲ್ಲಿ, ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಜೂನ್ 2021ರ ಮಾಹೆಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇಕಡ 50 ರಷ್ಟಕ್ಕೆ ವಿನಾಯಿತಿ ನೀಡಿ ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next