Advertisement

ಕೈಗಾರಿಕೆ ಸ್ಥಾಪನೆಗೆ ವಿಪುಲ ಅವಕಾಶ

03:06 PM Mar 14, 2021 | Team Udayavani |

‌ಗದಗ: ದೇಶ ಆರ್ಥಿಕವಾಗಿ ಅಭಿವೃದ್ಧಿ ಹೊಂದುವಲ್ಲಿ ಕೈಗಾರಿಕೆಗಳ ಪಾತ್ರ ಮಹತ್ವದ್ದಾಗಿದೆ. ರಾಜ್ಯದಲ್ಲಿ ಹೊಸ ಕೈಗಾರಿಕಾ ನೀತಿ-2020-25ರ ಅಡಿ ಕೈಗಾರಿಕೆಗಳ ಸ್ಥಾಪನೆಗೆ ವಿಪುಲ ಅವಕಾಶಗಳಿದ್ದು, ಉದ್ದಿಮೆದಾರರುಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ರಾಜ್ಯ ಸಣ್ಣ ಕೈಗಾರಿಕೆ,ವಾರ್ತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಕರೆ ನೀಡಿದರು.

Advertisement

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಸಣ್ಣ ಕೈಗಾರಿಕೆಗಳ ಸಂಘ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ನಗರದಲ್ಲಿ ಆಯೋಜಿಸಿದ್ದ ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳುಹಾಗೂ ಎನ್‌ಪಿಎ ಖಾತೆದಾರರ ಪರಿಹಾರೋಪಾಯ ಕುರಿತ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್‌-19 ಸೋಂಕಿನಿಂದಾಗಿ ಅನೇಕ ರಾಷ್ಟ್ರಗಳಿಂದ ಅದರಲ್ಲೂ ಪ್ರಮುಖವಾಗಿ ಚೀನಾದಿಂದ ಆಮದಾಗುವ ವಸ್ತುಗಳಿಗೆ ನಿರ್ಬಂಧ ಹೇರಲಾಗಿದೆ. ಆಮದು ವಸ್ತುಗಳನ್ನು ದೇಶದಲ್ಲಿಯೇ ಉತ್ಪಾದಿಸಲುಆತ್ಮನಿರ್ಭರ ಭಾರತದಡಿ ಉದ್ದಿಮೆದಾರರಿಗೆ ವಿಪುಲ ಅವಕಾಶಕಲ್ಪಿಸಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಒತ್ತು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ, ಸ್ಟಾರ್ಟ ಆಫ್‌ ಇಂಡಿಯಾ ಯೋಜನೆಗಳನ್ನು ಉದ್ದೆಮೆದಾರರು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕರಾದ ಕಳಕಪ್ಪ ಬಂಡಿ ಮಾತನಾಡಿ, ಕೈಗಾರಿಕೆ ಆರಂಭಿಸುವವರು ಸಮಸ್ಯೆ ಸವಾಲುಗಳನ್ನು ದಿಟ್ಟವಾಗಿ ಎದುರಿಸಬೇಕು. ಕೈಗಾರಿಕೆಗಳ ಸಂಖ್ಯೆ ಹೆಚ್ಚುವುದರಿಂದ ಪ್ರತಿಸ್ಪರ್ಧಿಗಳು ಹೆಚ್ಚುತ್ತಾರೆ ಎಂಬ ಕೀಳರಿಮೆಯನ್ನು ಬದಿಗೊತ್ತಿ, ಸೂರತ್‌ ಮಾದರಿಯನ್ನು ಅನುಸರಿಸಬೇಕು. ಅದರಂತೆ ಗದಗ ಜಿಲ್ಲೆಯು ಕೈಗಾರಿಕೆಗಳಿಗೆ ಹೆಸರುವಾಸಿಯಾಗಬೇಕು ಎಂದರು.

ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಹೊಸ ಕೈಗಾರಿಕಾ ವಸಾಹತುಗಳನ್ನು ನಿರ್ಮಿಸುವುದರೊಂದಿಗೆ ಈಗಿರುವ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ಮೂಲಭೂತಸೌಲಭ್ಯಗಳನ್ನು ಒದಗಿಸಬೇಕು. ಉದ್ದಿಮೆದಾರರಿಗೆ ಸಹಕಾರಿಯಾಗಲುಇನ್ವೆಸ್ಟ್‌ ಗದಗ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

Advertisement

ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಮಾತನಾಡಿ, ಜಿಲ್ಲೆಯಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳಿಗೆ ವಿಪುಲ ಅವಕಾಶಗಳಿವೆ. ಇಲ್ಲಿನ ಜಮೀನಿನ ಬೆಲೆಗಳು ದುಬಾರಿಯಾಗಿದ್ದು, ಉದ್ಯಮಿಗಳ ಬಹುಪಾಲುಬಂಡವಾಳ ಭೂಮಿ ಖರೀದಿಗೆ ವ್ಯಯವಾಗುತ್ತದೆ. ಭೂಮಿ ಖರೀದಿಗೆಸಬ್ಸಿಡಿ ಕೊಡಲಿಸಲು ಸರಕಾರ ಮಟ್ಟದಲ್ಲಿ ಪ್ರಯತ್ನಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಅಪರ ನಿರ್ದೇಶಕ ಎಚ್‌.ಎಂ.ಶ್ರೀನಿವಾಸ ಅವರು ನೂತನ ಕೈಗಾರಿಕೆ ನೀತಿ 2020-25 ನ್ನು ಪ್ರಸ್ತುಪಡಿಸಿದರು.

ಜಿ.ಪಂ. ಅಧ್ಯಕ್ಷ ಈರಪ್ಪ ನಾಡಗೌಡ್ರ, ವಿಧಾನ ಪರಿಷತ ಸದಸ್ಯ ಎಸ್‌ .ವಿ.ಸಂಕನೂರ, ದ್ರಾûಾರಸ ಮಂಡಳಿ ಅಧ್ಯಕ್ಷ ಕಾಂತಿಲಾಲ್‌ ಬನ್ಸಾಲಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂಗಮೇಶದುಂದೂರ, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಆನಂದಪೋತ್ನಿಸ್‌, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ ವೇದಿಕೆ ಮೇಲೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next