Advertisement

ಬಿಜೆಪಿ ಸರಕಾರಗಳಿಂದ ಎಸ್‍ಟಿ ಸಮುದಾಯಕ್ಕೆ ಉತ್ತಮ ಯೋಜನೆಗಳು: ಶ್ರೀರಾಮುಲು

05:34 PM Jan 06, 2022 | Team Udayavani |

 

Advertisement

ಬೆಂಗಳೂರು: ಬಿಜೆಪಿ ಎಸ್‍ಟಿ ಮೋರ್ಚಾದ ವತಿಯಿಂದ ದಕ್ಷಿಣ ಭಾರತಗಳಾದ ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಪರಿಶಿಷ್ಟ ಪಂಗಡದ ರಾಷ್ಟ್ರೀಯ ನೀತಿ ಮತ್ತು ಸಂಶೋಧನಾ ಕಾರ್ಯಾಗಾರವು ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು.

ಉದ್ಘಾಟನೆ ನೆರವೇರಿಸಿದ ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವರಾದ ಬಿ.ಶ್ರೀರಾಮುಲು ಅವರು ಮಾತನಾಡಿ, ಪ್ರಧಾನಿಗಳಾದ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯುತ್ತಮ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿವೆ. ಅವುಗಳು ಸರಿಯಾದ ಫಲಾನುಭವಿಯನ್ನು ಸಕಾಲದಲ್ಲಿ ತಲುಪುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ನೀತಿ ಮತ್ತು ಸಂಶೋಧನಾ ಘಟಕದ ರಾಷ್ಟ್ರೀಯ ಉಸ್ತುವಾರಿ ಡಾ. ಸುಮೇರ್ ಸಿಂಗ್ ಸೋಲಂಕಿ, ಸಹ ಉಸ್ತುವಾರಿ ಶ್ರೀಮತಿ ಅಜೀಂ ಬೊಬ್ಬಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಎಸ್‍ಟಿ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷರಾದ ಗಂಗಾಧರ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಶಾಂತಾರಾಮ ಸಿದ್ದಿ, ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ತಿಪ್ಪರಾಜು ಹವಾಲ್ದಾರ್ ಹಾಗೂ ಪ್ರಮುಖ ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next