Advertisement
ಕರಾವಳಿಯಲ್ಲಿ ಹಿಂಗಾರು ಚುರುಕುಗೊಂಡಿದ್ದು, ದ.ಕ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು ನಗರದಲ್ಲಿ ಸಂಜೆಯವರೆಗೆ ಮೋಡ ಮತ್ತು ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗಿದೆ. ಉಳಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.
ಉಡುಪಿ: ತಾಲೂಕಿನಾದ್ಯಂತ ಮಂಗಳವಾರ ಮಧ್ಯಾಹ್ನದ ಅನಂತರ ಭಾರೀ ಗುಡುಗು ಸಹಿತ ಮಳೆಯಾಗಿದೆ. ವಿವಿಧೆಡೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
Related Articles
Advertisement
ಕುಂದಾಪುರ ತಾಲೂಕಿನ ಇಡೂರು ಕುಂಜ್ಞಾಡಿ ಗ್ರಾಮದ ಪಾರ್ವತಿ ಶೆಡ್ತಿ ಅವರ ಮನೆಯ ಜಾನುವಾರುವಿಗೆ ಸಿಡಿಲು ಬಡಿದು ಮೃತಪಟ್ಟಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದ ವಿಶ್ವನಾಥ್ ಪಾಟ್ಕರ್ ಅವರ ಮನೆಗೆ ಸಿಡಿಲು ಬಡಿದು ಮನೆಯ ಛಾವಣಿ, ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿವೆ. ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಗ್ರಾಮದ ಸುಜಾತಾ ಅವರ ವಾಸ್ತವ್ಯದ ಪಕ್ಕಾ ಮನೆ ಸಂಪೂರ್ಣ ಹಾನಿಯಾಗಿದೆ.
ಬಂಟ್ವಾಳದ ಹಲವೆಡೆ ಹಾನಿಬಂಟ್ವಾಳ: ಬಂಟ್ವಾಳ ತಾಲೂಕಿನಾದ್ಯಂತ ಸೋಮವಾರ ಸಂಜೆ ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಮಳೆಯ ತೀವ್ರತೆಯ ಪರಿಣಾಮ ಹಲವೆಡೆ ಮನೆ ಹಾಗೂ ಕೃಷಿ ತೋಟಗಳಿಗೆ ಹಾನಿಯಾಗಿದೆ. ಬಿ.ಮೂಡ ಗ್ರಾಮದ ನಂದರಬೆಟ್ಟುನಲ್ಲಿ ಬಿಫಾತುಮ ಹಮ್ಮಬ್ಬ ಅವರ ಮನೆಯ ಮೇಲ್ಛಾವಣಿಗೆ ಹಾನಿಯಾಗಿದೆ. ಶಂಭೂರು ಗ್ರಾಮದ ದೇವಕಿ ಅವರ ಮನೆಗೆ ಮಳೆಯಿಂದ ಹಾನಿಯಾಗಿದೆ. ಮಾಣಿ ಗ್ರಾಮದ ವನಜಾಕ್ಷಿ ಆಳ್ವ ಅವರ ತೋಟದ ಅಡಿಕೆ ಮರಗಳಿಗೆ ಸಿಡಿಲು ಬಡಿದು ಹಾನಿಯಾಗಿದೆ.