Advertisement

ನಗರದ ವಿವಿಧೆಡೆ ಧಾರಾಕಾರ ಮಳೆ

01:08 PM Sep 20, 2020 | Suhan S |

ಬೆಂಗಳೂರು: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನಗರದಹಲವು ಭಾಗದಲ್ಲಿ ಶನಿವಾರ ಮಧ್ಯಾಹ್ನದಿಂದಲೇ ಧಾರಾಕಾರ ಮಳೆಯಾಗಿದೆ.

Advertisement

ಶನಿವಾರ ಬೆಳಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ನಗರ ಕೇಂದ್ರ ಭಾಗವಾದ ಮೆಜೆಸ್ಟಿಕ್‌, ಕೃಷ್ಣರಾಜೇಂದ್ರ ಮಾರುಕಟ್ಟೆ, ಕಾರ್ಪೋರೆಷನ್‌, ಎಂ.ಜಿ ರಸ್ತೆ ಹಾಗೂ ಟ್ರಿನಿಟಿ ಸೇರಿದಂತೆ ಹಲವು ಭಾಗದಲ್ಲಿ ಮಳೆಯಾಗಿದೆ.

ನಗರದ ವಿವಿಧೆಡೆ ಶನಿವಾರ ಸಾಧಾರಣ ಮಳೆ ಸುರಿದರೂ ರಸ್ತೆಗಳಲ್ಲಿ ಹಾಗೂ ಪ್ರಮುಖ ಅಂಡರ್‌ ಪಾಸ್‌ಗಳಲ್ಲಿ ಮಳೆ ನೀರು ನಿಂತು ಸಾರ್ವಜನಿಕರು ಪರದಾಡುವ ಪರಿಸ್ಥಿತಿನಿರ್ಮಾಣವಾಗಿತ್ತು. ಆದರೆ, ಮಳೆಯಿಂದ ನಗರದಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಬಿಬಿಎಂಪಿಯ ಸಹಾಯವಾಣಿ ಸಿಬ್ಬಂದಿ ತಿಳಿಸಿದ್ದಾರೆ.

ಮುರು ದಿನ ಮಳೆ ಸಾಧ್ಯತೆ: ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಗರದಲ್ಲಿಯೂ ಮುಂದಿನ ಮೂರು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next