Advertisement
ಸುಳ್ಯ ತಾಲೂಕಿನಾದ್ಯಂತ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಬಂಗಾಡಿಯಲ್ಲಿ ಗುಡುಗು ಸಹಿತ ಮಳೆಯಾದರೆ, ಮಂಗಳೂರು, ಮೂಲ್ಕಿಯಲ್ಲಿ ಮೋಡ ಆವರಿಸಿತ್ತು. ಬೆಳ್ತಂಗಡಿ ತಾಲೂಕಿನಲ್ಲಿ ಗಾಳಿ, ಸಿಡಿಲು ಸಹಿತ ಮಳೆಯಾಗಿದೆ. ಉಜಿರೆ, ಧರ್ಮಸ್ಥಳ, ನಾರಾವಿಯಲ್ಲಿ ಉತ್ತಮ ವರ್ಷ ಧಾರೆಯಾಗಿದೆ. ವೇಣೂರು, ಪುಂಜಾಲಕಟ್ಟೆಯಲ್ಲಿ ಗಾಳಿ ಸಹಿತ ಮಳೆ ಬಂದಿದೆ. ಸುಬ್ರಹ್ಮಣ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆ ಬಂದಿದೆ. ಕಡಬ, ವಿಟ್ಲ, ಪುತ್ತೂರಿನಲ್ಲಿ ಉತ್ತಮ ಮಳೆಯಾದರೆ, ಬಂಟ್ವಾಳದಲ್ಲಿ ಹನಿ ಮಳೆಯಾಗಿದೆ.
ಕೊಡಗು ಜಿಲ್ಲೆಯ ವಿವಿಧೆಡೆ ಸೋಮವಾರ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿತ್ತು. ಸೋಮವಾರಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮತ್ತೆ ಆಲಿಕಲ್ಲು ಮಳೆ ಸುರಿದಿದ್ದು ರೈತರು ಆತಂಕಕ್ಕೊಳಗಾಗಿದ್ದಾರೆ. ಚೆಟ್ಟಳ್ಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಗಾಳಿಮಳೆಗೆ ಮರದ ಕೊಂಬೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ವಿರಾಜಪೇಟೆ ಪಟ್ಟಣದಲ್ಲಿ ಹನಿಮಳೆಯಾಗಿದ್ದು, ಕಾಕೋಟುಪರಂಬು, ಹೆಗ್ಗಳ ಸೇರಿದಂತೆ ಕೆಲವು ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ. ಸೋಮವಾರ ಮುಸ್ಸಂಜೆ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಲಘು ಮಳೆಯಾಗಿದೆ. ಇನ್ನು ಕೆಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಿದೆ.
Related Articles
Advertisement
ಎರಡು ದಿನ ಮಳೆಅರಬಿ ಸಮುದ್ರದ ಕಡೆಯಿಂದ ಗಾಳಿ ಬೀಸುತ್ತಿದ್ದು, ಅದರ ಪ್ರಭಾವದಿಂದ ದಕ್ಷಿಣದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯಾಗುತ್ತಿದೆ. ಮಳೆ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಪೂರ್ವ ಮುಂಗಾರಿನಲ್ಲಿ ಸಾಧಾರಣವಾಗಿ ಆಗುವ ಪ್ರಕ್ರಿಯೆ ಇದು. ಕಳೆದೆರಡು ದಿನಗಳಿಂದ ಇದೇ ರೀತಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ. ಸಾಧಾರಣ ಮಳೆಯೊಂದಿಗೆ ಗುಡುಗು, ಸಿಡಿಲು ಮತ್ತು ಗಾಳಿಯೂ ಇರಲಿದೆ ಎಂದು ಕರ್ನಾಟಕ ರಾಜ್ಯ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರದ ವಿಜ್ಞಾನಿ ಸುನಿಲ್ ಗವಾಸ್ಕರ್ ತಿಳಿಸಿದ್ದಾರೆ.