Advertisement

Rain ಕೊಡಗಿನಲ್ಲಿ ಉತ್ತಮ ಮಳೆ: ಅಂಗಡಿ, ಮನೆಗಳಿಗೆ ನುಗ್ಗಿದ ನೀರು

12:35 AM May 21, 2024 | Team Udayavani |

ಮಡಿಕೇರಿ: ಮಡಿಕೇರಿ, ಭಾಗಮಂಡಲ, ವೀರಾಜಪೇಟೆ, ಕದನೂರು, ಕಕ್ಕಬ್ಬೆ, ನಾಪೋಕ್ಲು, ಮೂರ್ನಾಡು, ನಂಜರಾ ಯಪಟ್ಟಣ, ಗುಡ್ಡೆಹೊಸೂರು, ಸುಂಟಿಕೊಪ್ಪ, ಕುಶಾಲನಗರ, ಬೈಲುಕುಪ್ಪೆ ಸೇರಿದಂತೆ ಕೊಡಗು ಜಿಲ್ಲೆಯ ಬಹುತೇಕ ಕಡೆ ಉತ್ತಮ ಮಳೆಯಾಗಿದೆ. ಕುಶಾಲನಗರ ಭಾಗದಲ್ಲಿ ಅಂಗಡಿ ಮತ್ತು ಮನೆಗಳಿಗೆ ನೀರು ನುಗ್ಗಿದೆ.

Advertisement

ನಿರಂತರ ಮಳೆಯ ಪರಿಣಾಮ ಮಡಿಕೇರಿ ನಗರದ ರಸ್ತೆಗಳು ಜಲಾವೃತಗೊಂಡವು. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಮನೆ ಮತ್ತು ಅಂಗಡಿಗಳಿಗೆ ನುಗ್ಗುವ ಆತಂಕ ಸೃಷ್ಟಿಸಿತು. ಸುಂಟಿಕೊಪ್ಪ, ಕುಶಾಲನಗರ, ಬೈಲುಕುಪ್ಪೆ ಭಾಗದಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಅಂಗಡಿಗಳು ಮತ್ತು ಮನೆಗಳಿಗೆ ನೀರು ನುಗ್ಗಿದೆ.

ಕುಶಾಲನಗರ ಪುರಸಭೆ ವ್ಯಾಪ್ತಿಯ ಗುಮ್ಮನಕೊಲ್ಲಿ, ವೀರಭೂಮಿ, ಮಂಟಿ ಹಾಗೂ ಅಕ್ಕಪಕ್ಕದ ಬಡಾವಣೆಗಳ ಭಾಗದ ಮಳೆ ನೀರು ಗುಮ್ಮನಕೊಲ್ಲಿ ವಾರ್ಡ್‌ ನಂಬರ್‌ ನಾಲ್ಕು ಮತ್ತು ಐದರ ತಗ್ಗುಪ್ರದೇಶಗಳ ಮನೆಗಳಿಗೆ ನೀರು ನುಗ್ಗಿದೆ. ಕಾಫಿ ಕ್ಯೂರಿಂಗ್‌ ಸೆಂಟರ್‌ ಮತ್ತು ಮರದ ಮಿಲ್‌ಗ‌ಳಿಗೂ ನೀರು ಹರಿದಿದೆ. ರಸ್ತೆಗಳಲ್ಲಿ ಪ್ರವಾಹದಂತೆ ಬಂದ ನೀರು ಜನರಲ್ಲಿ ಆತಂಕ ಮೂಡಿಸಿತು.

 

Advertisement

Udayavani is now on Telegram. Click here to join our channel and stay updated with the latest news.

Next