Advertisement

Gruha Jyothi ಯೋಜನೆಗೆ ಭರ್ಜರಿ ರೆಸ್ಪಾನ್ಸ್: 76 ಲಕ್ಷಕ್ಕೂ ಅಧಿಕ ಯಶಸ್ವಿ ನೋಂದಣಿ

08:36 AM Jun 29, 2023 | Team Udayavani |

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಜೂನ್ 28 ಸಂಜೆ 4 ಗಂಟೆಯವರೆಗೆ 76,09,701 ಲಕ್ಷ ಅರ್ಜಿ ಸಲ್ಲಿಕೆಯಾಗುವ ಮೂಲಕ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

Advertisement

ರಾಜ್ಯದ ಒಟ್ಟು 6 ವಿದ್ಯುತ್ ಕಂಪನಿಗಳಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ವೇಗ ಪಡೆದಿದ್ದು ಪ್ರತಿ ನಿತ್ಯ ಕನಿಷ್ಠ10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ. ನೋಂದಣಿಗೆ ಯಾವುದೇ ಕೊನೆಯ ದಿನಾಂಕ ನಿಗದಿಪಡಿಸಿಲ್ಲ.

ರಾಜ್ಯದ ಇ-ಆಡಳಿತ ಗೃಹ ಜ್ಯೋತಿ ಯೋಜನೆಗೆ ಪ್ರತ್ಯೇಕವಾಗಿ ನೋಂದಣಿ ಲಿಂಕ್ ನೀಡಿದ ಬಳಿಕ ಅರ್ಜಿ ಸಲ್ಲಿಕೆಯು ದುಪ್ಪಟ್ಟಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲದೆ ವಿದ್ಯುತ್ ಕಛೇರಿ, ನಾಡಕಛೇರಿ ಹಾಗೂ ಕಂಪ್ಯೂಟರ್, ಲ್ಯಾಪ್ ಟಾಪ್, ಮೊಬೈಲ್ ಫೋನ್ ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಾಯಿಸಬಹುದು.

ಇದನ್ನೂ ಓದಿ:BJP Meet: ತಡರಾತ್ರಿ ಮೋದಿ ನಿವಾಸದಲ್ಲಿ ಬಿಜೆಪಿ ಹಿರಿಯ ನಾಯಕರ ಸಭೆ

ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ನೋಂದಣಿಗೆ ನಿಗದಿತ ಸೇವಾ ಶುಲ್ಕವನ್ನಷ್ಟೇ ಪಾವತಿಸಿ ನೋಂದಾಯಿಸಿಕೊಳ್ಳಬಹುದು. ಹೆಚ್ಚುವರಿ ಹಣಕ್ಕೆ ಯಾರಾದರೂ ಬೇಡಿಕೆಯಿಟ್ಟಲ್ಲಿ, ಗ್ರಾಹಕರು ಕೂಡಲೇ 24×7 ಸಹಾಯವಾಣಿ 1912 ಕ್ಕೆ ಕರೆಮಾಡಿ ತಿಳಿಸಬಹುದು. ಅಂತಹ ಪ್ರಯತ್ನಗಳ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

Advertisement

ನಕಲಿ ಲಿಂಕ್ ಗಳ ಬಗ್ಗೆ ಇರಲಿ ಎಚ್ಚರ: ಮೇಲ್ಕಂಡ ವೆಬ್ಸೈಟ್ ಹೊರತುಪಡಿಸಿ, ನೋಂದಣಿಗೆ ಯಾವುದೇ ಖಾಸಗಿ/ನಕಲಿ ವೆಬ್ಸೈಟ್ ಬಳಸದೇ ಇರುವುದು ಸೂಕ್ತ.

Advertisement

Udayavani is now on Telegram. Click here to join our channel and stay updated with the latest news.

Next