Advertisement

ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ಮನೆಯಿಂದ ಹೊರಬೀಳದ ಜನ

05:57 PM May 23, 2021 | Team Udayavani |

 

Advertisement

ಬೆಳಗಾವಿ: ಜಿಲ್ಲೆಯಲ್ಲಿ ಶನಿವಾರದಿಂದ ಖಡಕ್‌ ಲಾಕ್‌ಡೌನ್‌ ಜಾರಿಯಾಗಿದ್ದು, ವಾರಾಂತ್ಯದ ಲಾಕ್‌ಡೌನ್‌ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳನ್ನು ಪೊಲೀಸರು ಶನಿವಾರ ಸೀಜ್‌ ಮಾಡಿದ್ದಾರೆ.

ಸೋಂಕು ಹೆಚ್ಚಳವಾಗುತ್ತಿರುವುದರಿಂದ ಶನಿವಾರದಿಂದ ಮೇ 24ರ ಬೆಳಗ್ಗೆ 6 ಗಂಟೆವರೆಗೆ ಲಾಕ್‌ಡೌನ್‌ ಮಾಡಿ ಜಿಲ್ಲಾ ಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಪೊಲೀಸರು ಎಲ್ಲ ಕಡೆಗೂ ಬ್ಯಾರಿಕೇಡ್‌ಗಳನ್ನು ಹಾಕಿ ರಸ್ತೆ ಬಂದ್‌ ಮಾಡಿದ್ದರು. ಅನಗತ್ಯವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಿಚಾರಣೆ ನಡೆಸಿ ವಾಹನ ಸೀಜ್‌ ಮಾಡಿದರು.

ಲಾಕ್‌ಡೌನ್‌ದಿಂದಾಗಿ ಜನರು ಮನೆ ಬಿಟ್ಟು ಹೊರಗೆ ಬರಲಿಲ್ಲ. ಹಳ್ಳಿ ಹಳ್ಳಿಗಳಲ್ಲೂ ಸೀಲ್‌ಡೌನ್‌ ಮಾಡಿದ್ದರಿಂದ ಅಲ್ಲಿಯೂ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಜನರ ಓಡಾಟ ಸಂಪೂರ್ಣ ವಿರಳವಾಗಿತ್ತು. ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಾ. ವಿಕ್ರಮ್‌ ಆಮ್ಟೆ ಅವರು ಸ್ವತಃ ವಾಹನಗಳ ತಪಾಸಣೆ ನಡೆಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ನಿಂತು ವಾಹನ ಸವಾರರನ್ನು ವಿಚಾರಿಸಿದರು. ಕೆಲವರ ದಾಖಲೆಗಳನ್ನು ಪರಿಶೀಲಿಸಿದರು. ಅಗತ್ಯ ಸೇವೆಗಳಿಗೆ ತೆರಳುತ್ತಿದ್ದವರನ್ನು ಬಿಡಲಾಯಿತು. ಕುಂಟು ನೆಪ ಹೇಳಿದವರಿಗೆ ಪೊಲೀಸರು ಬುದ್ಧಿ ಹೇಳಿ ವಾಹನ ಸೀಜ್‌ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next