Advertisement

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

06:41 PM Jul 03, 2024 | Team Udayavani |

ರಾಜಲಕ್ಷ್ಮೀ ಎಂಟರ್‌ಟೈನ್ಮೆಂಟ್ಸ್‌ನಡಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್‌ ಚಂದ್ರಶೇಖರ್‌ ಶೆಟ್ಟಿ ನಿರ್ದೇಶನದಲ್ಲಿ ಜಯ್‌ ಶೆಟ್ಟಿ ನಾಯಕನಾಗಿ ನಟಿಸಿರುವ “ಸಂಭವಾಮಿ ಯುಗೇ ಯುಗೇ’ ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದೆ.

Advertisement

ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ ಎಂಬ ಖುಷಿಯ ಜೊತೆಗೆ ನಿರೀಕ್ಷಿಸಿದಷ್ಟು ಜನರು ಚಿತ್ರ ನೋಡುತ್ತಿಲ್ಲ ಎಂಬ ಬೇಸರ ಚಿತ್ರತಂಡಕ್ಕಿದೆ. ಪಕ್ಕಾ ಗ್ರಾಮೀಣ ಶೈಲಿಯ, ಉತ್ತಮ ಕಥಾಹಂದರ ಹೊಂದಿರುವ ನಮ್ಮ ಚಿತ್ರದ ಬಗ್ಗೆ ಉತ್ತಮ ಅಭಿಪ್ರಾಯ ಕೇಳಿ ಬರುತ್ತಿದೆ.

ಆದರೆ ನಾವು ನಿರೀಕ್ಷಿಸಿದಷ್ಟು ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ. ಆ ಬಗ್ಗೆ ಬೇಸರವಿದೆ. ಆದರೆ ಈವರೆಗೂ ನಮ್ಮ ಚಿತ್ರ ನೋಡಿದವರು ಚಿತ್ರದ ಕುರಿತು ಆಡುತ್ತಿರುವ ಒಳ್ಳೆಯ ಮಾತುಗಳು ಖುಷಿ ಕೊಟ್ಟಿದೆ.

ಕರ್ನಾಟಕದಾದ್ಯಂತ ಮೂವತ್ತಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಕಾಣುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ನಮ್ಮ ಚಿತ್ರವನ್ನು ನೋಡುವುದರ ಮೂಲಕ ಹೊಸತಂಡದ ಹೊಸಪ್ರಯತ್ನಕ್ಕೆ ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ಚೇತನ್‌ ಶೆಟ್ಟಿ

Advertisement

Udayavani is now on Telegram. Click here to join our channel and stay updated with the latest news.

Next