Advertisement

ಚಾ.ನಗರ: ಬಂದ್‌ಗೆ ಉತ್ತಮ ಪ್ರತಿಕ್ರಿಯೆ

12:16 PM Sep 29, 2020 | Team Udayavani |

ಚಾಮರಾಜನಗರ: ಭೂ ಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಚಾಮ ರಾಜನಗರದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

Advertisement

ಜಿಲ್ಲಾ ಕೇಂದ್ರ ಚಾಮರಾಜನಗರದಲ್ಲಿ ಬಹುತೇಕ ಅಂಗಡಿಗಳು, ಹೋಟೆಲ್‌ ಗಳು ಮುಚ್ಚಿದ್ದವು. ಅಗತ್ಯ ವಸ್ತು ಮತ್ತು ಸೇವೆ ಹೊರತುಪಡಿಸಿ ವ್ಯಾಪಾರ ವಹಿ ವಾಟು ಸ್ಥಗಿತಗೊಂಡಿತ್ತು. ಕೆಎಸ್‌ಆರ್‌ ಟಿಸಿ ಹಾಗೂ ಖಾಸಗಿ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಸರ್ಕಾರಿ ಕಚೇರಿ ಗಳಲ್ಲಿ ಹಾಜರಾತಿ ವಿರಳವಾಗಿತ್ತು.

ಪ್ರತಿಭಟನೆ: ಬಂದ್‌ ವೇಳೆ ವಿವಿಧೆಡೆ ರೈತ ಹಾಗೂ ಇತರ ಸಂಘಟನೆಗಳ ಕಾರ್ಯ ಕರ್ತರು ಪ್ರತಿಭಟನೆ ನಡೆಸಿದರು ನಗರದ ಭುವನೇಶ್ವರಿ ವೃತ್ತದಲ್ಲಿ ಬೆಳ್ಳಂಬೆಳಗ್ಗೆ 6 ಗಂಟೆಗೆ ಸಮಾವೇಶ ಗೊಂಡ ಪ್ರತಿಭಟನಾನಿರತರು ಟೈರ್‌ಗೆ ಬೆಂಕಿಹಚ್ಚಿಕೇಂದ್ರಮತ್ತು ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಉರಿಯುವ ಬೆಂಕಿ ಟೈರನ್ನು ಪೊಲೀಸರು ಆಗ್ನಿಶಾಮಕದಳದವರಿಂದ ನಂದಿಸಲು ಮುಂದಾದಾಗ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.

ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್‌ ಮಾತನಾಡಿ, ಭೂ ಸುಧಾ ರಣೆ ಕಾಯ್ದೆಯಿಂದ ಇಡೀ ರೈತ ಸಂಕುಲ ನಾಶವಾಗಲಿದೆ. ಎಪಿಎಂಸಿ ಮತ್ತು ಭೂ ಸುಧಾರಣೆ ಕಾಯ್ದೆಗಳ ತಿದ್ದುಪಡಿಯನ್ನು ಹಿಂಪಡೆಯುವಂತೆ ಆಗ್ರಹಿಸಿದರು.

ಕಾಂಗ್ರೆಸ್‌ ಬೆಂಬಲ: ಪ್ರತಿಭಟನೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಮಹ ಮ್ಮದ್‌ ಅಸ್ಗರ್‌, ಗುರುಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಕಾಗಲವಾಡಿಚಂದ್ರು, ಎಪಿಎಂಸಿ ಅಧ್ಯಕ್ಷ ನಾಗೇಂದ್ರ, ಎಂ.ಶಿವಮೂರ್ತಿ, ನಗರ ಸಭಾ ಮಾಜಿ ಸದಸ್ಯ ಪುಟ್ಟಸ್ವಾಮಿ, ಅಲ್ಪ ಸಂಖ್ಯಾತರ ಘಟಕ ಅಧ್ಯಕ್ಷ ಮಹಮ್ಮದ್‌ ಇಮ್ರಾನ್‌, ಫ‌ರ್ವಿಜ್‌ ಅಹಮದ್‌ ಭಾಗವಹಿಸಿ ಬೆಂಬಲ ಸೂಚಿಸಿದರು.

Advertisement

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಮಹಮ್ಮದ್‌ ಅಸYರ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ರೈತ ವಿರೋಧಿ ಕಾನೂನು ಜಾರಿಗೆ ತಂದು ರೈತರ ಪ್ರಾಣದ ಜತೆ ಚೆಲ್ಲಾಟ ಆಡುತ್ತಿದೆ. ಜನಪರ ಯೋಜನೆಗಳನ್ನು ತರುವಲ್ಲಿ ಸಂಪೂರ್ಣ ವಿಫ‌ಲವಾಗಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಎ.ಎಂ.ಮಹೇಶ್‌ಪ್ರಭು, ಎನ್‌. ಮಹೇಶ್‌ ಅಭಿಮಾನಿ ಬಳಗದ ಆಲೂ ರುಮಲ್ಲು, ನಿಜಧ್ವನಿ ಗೋವಿಂದರಾಜ್‌, ಮೂಕಳ್ಳಿ ಮಹದೇವಸ್ವಾಮಿ, ಪಟೇಲ್‌ ಶಿವಮೂರ್ತಿ, ಪಾಲಹಳ್ಳಿ ಕುಮಾರ್‌, ಕುಂತೂರು ಪ್ರಭುಸ್ವಾಮಿ, ನಾಗರಾಜು, ಪರ್ವತ್‌ರಾಜ್‌, ಸುಂದರ್‌ರಾಜ್‌, ಹೆಬ್ಬ ಸೂರು ಬಸವಣ್ಣ, ಸಿದ್ದರಾಜು, ಚೆನ್ನ ಬಸಪ್ಪ, ಸಿ.ಎಸ್‌.ಸೈಯದ್‌ ಆರೀಫ್ ಇತರರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next