ಕಾನೂನು ಅರಿವು ಮೂಡಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣ ಮಾಡಬಹುದು ಎಂದು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಶ್ರೀಶೈಲ ಭೀಮಸೇನ ಬಾಗಡಿ ಹೇಳಿದರು.
Advertisement
ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಇವುಗಳ ಸಹಯೋಗದೊಂದಿಗೆ ಕಾನೂನು ಸೇವಾ ಪ್ರಾಧಿಕಾರದ ಸೇವೆ ಮತ್ತು ಸೌಲಭ್ಯಗಳ ಪ್ರಚಾರ ಆಂದೋಲನ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆರ್ಥಿಕವಾಗಿ ಹಿಂದುಳಿದವರಿಗೆ ಉಚಿತ ಕಾನೂನು ಸೌಲಭ್ಯ ನೀಡಲಾಗುತ್ತಿದೆ. ಕ್ಲಿಷ್ಟಕರವಾದ ಸಮಸ್ಯೆಗಳನ್ನು ಕಾನೂನಡಿ ಪರಿಹರಿಸಿಕೊಳ್ಳಬಹುದಾಗಿದೆ. ಕಾನೂನು ಸೇವಾ ಪ್ರಾಧಿಕಾರದ ಸೇವೆ ಮತ್ತು ಸೌಲಭ್ಯಗಳ ಪ್ರಚಾರ ಆಂದೋಲನದ ಮೂಲಕ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಕಾನೂನು ಅರಿವು ಮೂಡಿಸಲಾಗಿದೆ. ಪ್ರಬಂಧ ಸ್ಪರ್ಧೆ, ರ್ಯಾಲಿ ಮತ್ತು ಆಶುಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು ಎಂದರು.
Related Articles
Advertisement
ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಪಿ.ಜಿ. ವಸಂತಕುಮಾರ್, ಉಪಾಧ್ಯಕ್ಷ ಚಂದ್ರಶೇಖರ್, ಕಾರ್ಯದರ್ಶಿ ಸಿದ್ದಪ್ಪ, ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ತಿಮ್ಮಪ್ಪ, ನ್ಯಾಯವಾದಿಗಳಾದ ರಾಜಶೇಖರ ನಾಯಕ, ಎಚ್. ಚಂದ್ರಣ್ಣ, ವಿ.ಜಿ. ಪರಮೇಶ್ವರಪ್ಪ, ಬಿ. ಒಳಮs…, ಅನಸೂಯಾ, ಕೆ.ಬಿ. ಮಲ್ಲಿಕಾರ್ಜುನ, ಕುಮಾರ್ ಮತ್ತಿತರರು ಭಾಗವಹಿಸಿದ್ದರು.