Advertisement

ಬಿಜೆಪಿಯಿಂದ ಜನಪರ ಕೆಲಸ: ರಾಮಚಂದ್ರ

05:05 PM Dec 03, 2020 | Suhan S |

ಜಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯದಲ್ಲಿ ಅಭಿವೃದ್ಧಿಯ ಪರ್ವವಿದ್ದು, ಈ ಪಕ್ಷದಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸುವಂತ ಕೆಲಸ ಮಾಡುತ್ತಿದೆ ಎಂದು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಶಾಸಕ ಎಸ್‌.ವಿ.ರಾಮಚಂದ್ರ ಹೇಳಿದರು.

Advertisement

ತಾಲೂಕಿನ ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠದಲ್ಲಿ ಬುಧವಾರ ತಾಲೂಕು ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಜಗಳೂರು ವಿಧಾನಸಭಾ ಕ್ಷೇತ್ರದ ಪ್ರಶಿಕ್ಷಣ ವರ್ಗ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಹಾಗೂರಾಜ್ಯ ಸರ್ಕಾರಗಳು ಜನಪರ ಕೆಲಸಗಳನ್ನು ಜಾರಿಗೆ ತರುವ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿವೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಸಹಿಸದವರು ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ರಾಜೇಶ್‌ಗೆ ಪರೋಕ್ಷವಾಗಿ ಟಾಂಗ್‌ ನೀಡಿದ ಅವರು, ಶಾಸಕರಾಗಿದ್ದ ವೇಳೆ ಕಾಂಗ್ರೆಸ್‌ ಸರ್ಕಾರದ ಅವಧಿ ಯಲ್ಲಿ 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಬಜೆಟ್‌ನಲ್ಲಿ 250 ಕೋಟಿ ರೂ.ಗೆ ಅನುಮೋದನೆನೀಡಿತ್ತೇ ವಿನಃ ಯಾವುದೇ ಕೆಲಸಗಳು ನಡೆಯಲಿಲ್ಲ.ನಂತರ ಅಧಿಕಾರಕ್ಕೆ ಬಂದ ಸಮ್ಮಿಶ್ರ ಸರಕಾರವು ಸಹ ಗಮನ ಹರಿಸಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ  ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ 650 ಕೋಟಿ ರೂ. ಅನುದಾನ ನೀಡಿ ಕಾಮಗಾಗಿ ಭರದಿಂದ ಸಾಗುತ್ತಿದ್ದು, ಮುಂದಿನ ವರ್ಷ ಜೂನ್‌ ವೇಳೆಗೆ ಕೆರೆಗಳಿಗೆ ನೀರು ಬರಲಿವೆ ಎಂದರು.

ಕೆಲವರು ನನ್ನ ಅಧಿಕಾರವದಿಯಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆ ಬಂದಿದೆ ಎಂದು ಹೇಳುತ್ತಾ ತಿರುಗಾಡುತ್ತಿದ್ದು, ಜನರನ್ನು ದಾರಿ ತಪ್ಪಿಸುವ ಹುನ್ನಾರ ನಡೆಯುತ್ತಿದೆ. ಪಟ್ಟಣದಲ್ಲಿ ಬಸ್‌ ನಿಲ್ದಾಣ, ಮುಖ್ಯ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ.ಗುರುಭವನ ಮುಂಭಾಗದಲ್ಲಿ ಬಯಲು ರಂಗಮಂದಿರ,ಆಡಿಟೋರಿಯಂ ನಿರ್ಮಾಣ ಮಾಡಲಾಗುತ್ತಿದೆ. ಕಾಂಗ್ರೆಸ್‌ನವರು ಬರೀ ಪ್ರಚಾರಕ್ಕಾಗಿ ಯೋಜನೆಗಳನ್ನು ಘೋಷಿಸಿಅನುಷ್ಠಾನಕ್ಕೆ ತರದೇ ನಿರ್ಲಕ್ಷ್ಯ ವಹಿಸಿದ್ದು, ಇದೀಗ ಬಿಜೆಪಿ ಆಡಳಿತದಲ್ಲಿ ನನ್ನ ಅಧಿಕಾರಾವಧಿ ಯಲ್ಲಿ ನನೆಗುದಿಗೆ ಬಿದ್ದಿದ್ದ ಯೋಜನೆಗಳನ್ನು ಕೈಗೆತ್ತಿಕೊಂಡು ಕಾಮಗಾರಿಗಳನ್ನು ಪೂರ್ಣಗೊಳಿಸುವ ಕೆಲಸ ಮಾಡುತ್ತಿದ್ದೇನೆ. ಇದನ್ನು ಸಹಿಸದ ವಿಪಕ್ಷಗಳು ವೃಥಾ ಆರೋಪ ಮಾಡುತ್ತಾ ಕಾಲ ಕಳೆಯುವ ಬದಲು ಗ್ರಾಮೀಣ ಭಾಗದಲ್ಲಿ ಹೋಗಿ ನಾವು ಮಾಡಿರುವ ಕೆಲಸಗಳನ್ನು ನೋಡಿ ಮಾತನಾಡಲಿ ಎಂದು ಸವಾಲು ಹಾಕಿದರು,

ಬಿಜೆಪಿ ಮಂಡಲ ಅಧ್ಯಕ್ಷ ಎಚ್‌.ಸಿ.ಮಹೇಶ್‌, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಜಿಲ್ಲಾ ಪ್ರಧಾನಕಾರ್ಯದರ್ಶಿ ಸೊಕ್ಕೆ ನಾಗರಾಜ್‌, ಜಿಲ್ಲಾ ಉಪಾಧ್ಯಕ್ಷ ಡಿ.ವಿ.ನಾಗಪ್ಪ, ಶಿವಕುಮಾರಸ್ವಾಮಿ, ಜಿಪಂ ಸದಸ್ಯರಾದ ಶಾಂತಕುಮಾರಿ ಶಶಿಧರ್‌, ಎಸ್‌.ಕೆ.ಮಂಜುನಾಥ್‌, ರಶ್ಮಿ ರಾಜಪ್ಪ, ಪಪಂ ಅಧ್ಯಕ್ಷ ಆರ್‌.ತಿಪ್ಪೇಸ್ವಾಮಿ, ಉಪಾಧ್ಯಕ್ಷೆ ಲಲಿತ ಶಿವಣ್ಣ, ಓಬಿಸಿ ಮೋರ್ಚಾದ ಇಂದ್ರೇಶ್‌, ರೈತ ಮೋರ್ಚಾದ ಕೆಂಚನಗೌಡ್ರು, ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗು ಪದಾಧಿಕಾರಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next