ಪುಣೆ: ಸೋಮವಾರ ಪುಣೆಯಲ್ಲಿರುವ ಗೂಗಲ್ ಕಚೇರಿಗೆ ಬಾಂಬ್ ಇಡುವುದಾಗಿ ಬೆದರಿಕೆ ಕರೆ ಮಾಡಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಮುಂಬಯಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪುಣೆಯಲ್ಲಿರುವ ಗೂಗಲ್ ಕಚೇರಿಗೆ ಅನಾಮದೇಯ ವ್ಯಕ್ತಿ ಕರೆ ಮಾಡಿದ್ದು ಅದರಂತೆ ತಾನು ಕಚೇರಿಗೆ ಬಾಂಬ್ ಇರಿಸುವುದಾಗಿ ಬೆದರಿಕೆಯೊಡ್ಡಿದ್ದಾನೆ ಇದರಿಂದ ಗಾಬರಿಗೊಂಡ ಸಿಬ್ಬಂದಿ ಕೂಡಲೇ ಹತ್ತಿರದ ಠಾಣೆಗೆ ಮಾಹಿತಿ ನೀಡಿದ್ದಾನೆ, ವಿಚಾರ ತಿಳಿದು ಗೂಗಲ್ ಕಚೇರಿಗೆ ಧಾವಿಸಿ ಬಂದ ಪೊಲೀಸರ ತಂಡ ಕಚೇರಿಯನ್ನು ಪರಿಶೀಲನೆ ನಡೆಸಿದೆ, ಜೊತೆಗೆ ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿ ಕಾರ್ಯಾಚರಣೆಯನ್ನು ನಡೆಸಿ ಬಾಂಬ್ ಕರೆ ಹುಸಿ ಎಂಬುದು ತಿಳಿದುಬಂತು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿಶೀಲನೆಗೆ ಇಳಿದಾಗ ಕರೆ ಮಾಡಿದ ವ್ಯಕ್ತಿ ಹೈದರಾಬಾದ್ ಮೂಲದವನೆಂದು ತಿಳಿದು ಬಂದಿದ್ದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನು ಯಾವುದೇ ಕಚೇರಿಗೆ ಬಾಂಬ್ ಇರಿಸಲಿಲ್ಲ ಮದ್ಯದ ಅಮಲಿನಲ್ಲಿ ಈ ರೀತಿ ಮಾಡಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ.
ಸದ್ಯ ಪೊಲೀಸರ ವಶದಲ್ಲಿರುವ ವ್ಯಕ್ತಿಯನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ: ಯಶ್, ರಿಷಬ್ ಭೇಟಿ : ಕಾಂತಾರ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ