Advertisement
ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನ್ಯಾಯ ಸಮ್ಮತ ಮತದಾನಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ. ಗೂಗಲ್ ಪೇ ಇನ್ನಿತರ ಇ-ಅಕೌಂಟ್‌ಗಳಿಂದ ಬೇರೆ ಬೇರೆ ಅಕೌಂಟ್‌ಗಳಿಗೆ ಹಣ ಸಂದಾಯವಾಗಿರುವ ಬಗ್ಗೆ ಪ್ರಕರಣ ದಾಖಲಾದರೆ ಆ ಬಗ್ಗೆ ತನಿಖೆ ನಡೆಸಲಾಗುವುದು. ಒಂದೇ ಅಕೌಂಟ್‌ನಿಂದ ಸುಮಾರು 50 ರಿಂದ 100 ಮಂದಿಗೆ ಪದೇ ಪದೆ ಹಣ ಪಾವತಿ ಆದರೆ ಅಂತಹವರ ವಿರುದ್ಧ ಕೂಡ ಚುನಾವಣ ಆಯೋಗದ ನಿಯಮದ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜಧಾನಿಯಲ್ಲಿ ಶೇಕಡವಾರು ಮತದಾನ ಹೆಚ್ಚಳದ ಬಗ್ಗೆ ಕ್ರಮ ವಹಿಸಲಾಗಿದೆ. ಬ್ರ್ಯಾಂಡ್ ಅಂಬಾಸಿಡರ್‌ಗಳ ಮೂಲಕ ಮತದಾನದ ಬಗ್ಗೆ ಅರಿವು ಮೂಡಿಸಲಾಗುವುದು. ನಗರದ ಹಲವು ಕಡೆಗಳಿಗೆ ಬ್ರ್ಯಾಂಡ್ ಅಂಬಾಸಿಡರ್‌ಗಳು ತೆರಳಿ ಸಾರ್ವಜನಿಕರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸಲಿದ್ದಾರೆ. ಕಳೆದ ಬಾರಿಯ ಮತದಾನಕ್ಕಿಂತಲೂ ಅಧಿಕ ಮತದಾನ ಆಗಬೇಕು ಎಂಬ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.