ಶಿವಮೊಗ್ಗ : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಮುಖ್ಯಮಂತ್ರಿಯಾಗುತ್ತಾರೆ, ಬಿಜೆಪಿ ಸರ್ಕಾರದ ಅಜೆಂಡವೇ ಮೂವರು ಸಿಎಂ ಆಗುವುದು ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲ ಸತ್ತಿದೆಯೋ ತಿಳಿಯುತ್ತಿಲ್ಲ. ಅತಿ ವೃಷ್ಟಿಯಿಂದ ರೈತರು ತತ್ತರಿಸಿ ಹೋಗಿದ್ದಾರೆ. ರೈತರು ಬೀದಿಗೆ ಬೀಳುವ ಸ್ಥಿತಿ ಬಂದಿದೆ. ಆದರೆ ಬಿಜೆಪಿ ಸಚಿವರು ಹಾಗೂ ಶಾಸಕರು ಚುನಾವಣೆ ಮೇಲೆ ಬಿದ್ದಿದ್ದಾರೆ ಎಂದು ಗುಡುಗಿದರು.
ರೈತರಿಗೆ ಹತ್ತು ರೂಪಾಯಿ ಪರಿಹಾರ ನೀಡಲು ಸಾಧ್ಯವಾಗಿಲ್ಲ ಈ ಸರ್ಕಾರಕ್ಕೆ. ಆದರೆ ಬಿಜೆಪಿಯವರು ಕಾಂಗ್ರೆಸ್ ಅಸ್ತಿತ್ವದಲ್ಲಿ ಇಲ್ಲ ಎನ್ನುತ್ತಿದ್ದಾರೆ. ಆದರೆ ಮುಂದೆ ಬಿಜೆಪಿ ಇರುತ್ತದೆಯೋ ಎಂಬುದನ್ನು ನೋಡಿಕೊಳ್ಳಲಿ. ಕಾಂಗ್ರೆಸ್ ಸದೃಢವಾಗಿದೆ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಆದರೆ ಯಡಿಯೂರಪ್ಪ ಮುಂದಿನ ಚುನಾವಣೆಯಲ್ಲಿ 140 ಸ್ಥಾನದಲ್ಲಿ ಗೆಲ್ಲುತ್ತೇವೆ ಎನ್ನುತ್ತಾರೆ. ಆದರೆ ಯಡಿಯೂರಪ್ಪ ಅವರನ್ನೇ ಕೆಳಗಿಳಿಸಿದ್ದಾರೆ. ಇನ್ನೆಲ್ಲಿ ಗೆಲ್ಲುವುದು ಎಂದು ವ್ಯಂಗ್ಯವಾಡಿದರು.
ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಮುಖ್ಯಮಂತ್ರಿಯಾಗುತ್ತಾರೆ, ಬಿಜೆಪಿ ಸರ್ಕಾರದ ಅಜೆಂಡವೇ ಮೂವರು ಸಿಎಂ ಆಗುವುದು. ಈ ಹಿಂದೆ ಯಡಿಯೂರಪ್ಪ, ಸದಾನಂದ ಗೌಡ ಹಾಗೂ ಜಗದೀಶ್ ಶೆಟ್ಟರ್ ಸಿಎಂ ಅಗಿದ್ದರು. ಈ ಬಾರಿ ಯಡಿಯೂರಪ್ಪ ಸಿಎಂ ಆಗಿದ್ದರು. ಇದೀಗ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾರೆ. ಮುಂದಿನ ದಿನಗಳಲ್ಲಿ ಮುರುಗೇಶ ನಿರಾಣಿ ಸಿಎಂ ಆಗುತ್ತಾರಂತೆ.
ಇದನ್ನೂ ಓದಿ : ನಾಡಗೀತೆ ಮೇಲೆ ಈ ಹಸುವಿಗೆ ಅದೆಷ್ಟು ಗೌರವ ನೋಡಿ : ವಿಡಿಯೋ ವೈರಲ್
ಆದರೆ ನಿರಾಣಿ ಸಿಎಂ ಆಗುತ್ತಾರೆ ಎಂದು ನಾವು ಹೇಳುತ್ತಿಲ್ಲ, ಬದಲಿಗೆ ಅವರ ಪಕ್ಷದವರೇ ಹೇಳುತ್ತಿದ್ದಾರೆ. ಹೀಗಾಗಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಸಿಎಂ ಆಗುವುದೇ ಬಿಜೆಪಿ ಅಜೆಂಡಾ.ಇವರು ಅಧಿಕಾರಕ್ಕೆ ಬಂದಿರುವುದು 40 ಪರ್ಸೆಂಟ್ ಕಮಿಷನ್ ಏಜೆಂಟ್ ಆಗಿ ಬಂದಿರುವುದು.
ಈ ಬಜೆಟ್ ಬಳಿಕ ರಾಜ್ಯದಲ್ಲಿ ಸಿಎಂ ಬದಲಾಗುತ್ತಾರೆ, ಹೀಗಾಗಿ ಎಲ್ಲರೂ ಲೂಟಿಗೆ ಇಳಿದಿದ್ದಾರೆ. ಇಂಥ ಭ್ರಷ್ಟ ಹಾಗೂ ಸತ್ತು ಹೋಗಿರುವ ಸರ್ಕಾರವನ್ನು ಹಿಂದೆಂದೂ ನೋಡಿಲ್ಲ. ರೈತರ ಶಾಪ ಖಂಡಿತಾ ಈ ಸರ್ಕಾರಕ್ಕೆ ತಟ್ಟುತ್ತದೆ ಎಂದು ಗುಡುಗಿದರು.