Advertisement

ಹೆಕ್ಟೇರ್‌ಗೆ 13,500 ಪರಿಹಾರ: ಸಂಗಣ್ಣ

01:55 PM Apr 19, 2020 | Naveen |

ಗೊರೇಬಾಳ: ರಾಯಚೂರು-ಕೊಪ್ಪಳ ಜಿಲ್ಲೆಯಲ್ಲಿ ಭತ್ತದ ಬೆಳೆ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು 45 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಅದರಂತೆ ಪ್ರತಿ ಹೆಕ್ಟೇರ್‌ಗೆ 13,500 ಸಾವಿರ ರೂ. ಪರಿಹಾರ ಸಿಗಲಿದೆ ಎಂದು ಸಂಸದ ಕರಡಿ ಸಂಗಣ್ಣ ತಿಳಿಸಿದರು.

Advertisement

ಬಸ್ಸಾಪುರದ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಸರ್ಕಾರ ರೈತಪರವಾಗಿದೆ ಎಂದರು. ಅಧಿಕಾರಿಗಳು ಕೂಡಲೇ ಸರ್ವೆ ಕಾರ್ಯ ನಡೆಸಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಕಳೆದ 15 ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಸಿದ್ಧಪಡಿಸಲಾದ ವರದಿಯಲ್ಲಿ ಈಗ ಹಾನಿಯಾದ ಪ್ರದೇಶದ ಮಾಹಿತಿ ಸೇರ್ಪಡೆ ಮಾಡಿ ರೈತರಿಗೆ ಪರಿಹಾರ ಕೊಡಿಸುವಲ್ಲಿ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ವೆಂಕಟರಾವ್‌ ನಾಡಗೌಡ, ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಕಾಡಾ ಅಧ್ಯಕ್ಷ ಆರ್‌.ಬಸನಗೌಡ ತುರ್ವಿಹಾಳ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಪಂ ಸದಸ್ಯಅಮರೇಗೌಡ ವಿರುಪಾಪುರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next