Advertisement

ಪತ್ರಕರ್ತರ ಕಡೆಗಣನೆ ದುರದೃಷ್ಟಕರ

04:24 PM May 04, 2020 | Naveen |

ಗೊರೇಬಾಳ: ಕೋವಿಡ್ ವೈರಸ್‌ ಭೀತಿಯಲ್ಲೂ ಜೀವದ ಹಂಗು ತೊರೆದು ಹಗಲಿರುಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರನ್ನು ಆಳುವ ಸರ್ಕಾರಗಳೇ ಕಡೆಗಣಿಸುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಹಿರಿಯ ಪತ್ರಕರ್ತ ಪ್ರಹ್ಲಾದಗುಡಿ ವಕೀಲ ವಿಷಾದ ವ್ಯಕ್ತಪಡಿಸಿದರು.

Advertisement

ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ ನಿವಾಸದಲ್ಲಿ ರವಿವಾರ ನಡೆದ ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನಾಚರಣೆ ಹಾಗೂ ಪತ್ರಕರ್ತರು ಮತ್ತು ಪತ್ರಿಕಾ ವಿತರಕರಿಗೆ ಆಹಾರದ ದಿನಸಿ ಸಾಮಗ್ರಿಗಳ ಕಿಟ್‌ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್‌ ಪರಿಣಾಮದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸ್ಥಳೀಯ ಪತ್ರಿಕೆಗಳು ಮುದ್ರಣವಾಗದೆ ಸ್ಥಗಿತಗೊಂಡಿವೆ. ಸಿಬ್ಬಂದಿಗೆ ಸಂಬಳ ಕೊಡಲಾಗುತ್ತಿಲ್ಲ. ಕೋವಿಡ್ ವೈರಸ್‌ ಕುರಿತು ಗಂಟೆಗಟ್ಟಲೇ ಭಾಷಣ ಬಿಗಿಯುವ ಪ್ರಧಾನಿ ಮೋದಿ ಪತ್ರಕರ್ತರಿಗೆ ಕನಿಷ್ಠ ವಿಮೆ ಸೌಲಭ್ಯ ಘೋಷಿಸಿಲ್ಲ. ಬರೀ ಭಾಷಣದಿಂದ ಹೊಟ್ಟೆ ತುಂಬುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು. ಆದ್ದರಿಂದ ಪತ್ರಕರ್ತರ ನೋವನ್ನು ವಿವಿಧ ರಾಜಕೀಯ ಪಕ್ಷಗಳ ನಾಯಕರು ಸರ್ಕಾರದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ ಮಾತನಾಡಿ, ಕೋವಿಡ್ ವೈರಸ್‌ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಠಿಣ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಜನರು ಸಹ ಸರ್ಕಾರದ ಆದೇಶ ಪಾಲನೆ ಮಾಡುವ ಮೂಲಕ ಕೋವಿಡ್ ವೈರಸ್‌ ವಿರುದ್ಧ ಹೋರಾಡಬೇಕು ಎಂದು ಹೇಳಿದರು.

ಕಾಡಾ ಅಧ್ಯಕ್ಷ ಆರ್‌. ಬಸನಗೌಡ ತುರ್ವಿಹಾಳ, ಬಿಜೆಪಿ ಮುಖಂಡರಾದ ದೇವೇಂದ್ರಪ್ಪ ಯಾಪಲಪರ್ವಿ, ಪರಮೇಶಪ್ಪ ದಢೇಸುಗೂರು, ರುದ್ರಗೌಡ, ಈರೇಶ ಇಲ್ಲೂರು, ಜಡಿಯಪ್ಪ ವಕೀಲ, ಮಲ್ಲಿಕಾರ್ಜುನ, ರಾಮನಗೌಡ, ಮಲ್ಲಿಕಾರ್ಜುನ ಜೀನೂರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next