Advertisement
ಸಿಂಧನೂರು ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಆಹ್ವಾನ ಪತ್ರಿಕೆಗಳನ್ನು ಮುದ್ರಿಸಿ ಆಜೀವ ಸದಸ್ಯರು, ಕನ್ನಡ ಪರ ಸಂಘಟನೆಗಳು, ಸಾಹಿತಿಗಳಿಗೆ ಹಂಚಲಾಗುತ್ತಿದೆ. ಸಮ್ಮೇಳನ ಯಶಸ್ಸಿಗೆ ಸ್ವಾಗತ, ಮೆರವಣಿಗೆ, ವೇದಿಕೆ, ಆಹಾರ, ಕಿಟ್ ವಿತರಣೆ, ಸಾಂಸ್ಕೃತಿಕ, ಆಮಂತ್ರಣ, ಸಮನ್ವಯ, ಆಹಾರ, ಆರೋಗ್ಯ, ನೈರ್ಮಲ್ಯ, ಸಾರಿಗೆ, ಮಹಿಳೆ, ಸಾಮಾಜಿಕ ಜಾಲತಾಣ, ಸಂಪರ್ಕ, ಶಿಸ್ತು ಪಾಲನೆ, ವಸತಿ, ಚಿತ್ರಕಲಾ ಪ್ರದರ್ಶನ, ಪ್ರಚಾರ ಹಾಗೂ ಯುವಕರ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.
Related Articles
Advertisement
ಅ.22ರಂದು ಶಾಸಕ ವೆಂಕಟರಾವ್ ನಾಡಗೌಡ ಧ್ವಜಾರೋಹಣ ನೆರವೇರಿಸುವರು. ಬಸವ ವೃತ್ತದಿಂದ ಪ್ರವಾಸಿ ಮಂದಿರದವರೆಗೆ ಸಮ್ಮೇಳನ ಅಧ್ಯಕ್ಷ ಪ್ರೊ| ಶಾಶ್ವತಸ್ವಾಮಿ ಮುಕ್ಕುಂದಿಮಠ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರ ಮೆರವಣಿಗೆ ನಡೆಸಲಾಗುವುದು. ಪ್ರವಾಸಿ ಮಂದಿರದಿಂದ ಸಮ್ಮೇಳನ ನಡೆಯುವ ಕಮ್ಮವಾರಿ ಕಲ್ಯಾಣ ಮಂಟಪದವರೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ನಂತರ ನಡೆಯುವ ಸಮ್ಮೇಳನವನ್ನು ಕಸಾಪ ರಾಜ್ಯಾಧ್ಯಕ್ಷ ಡಾ| ಮನು ಬಳಿಗಾರ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು, ಸ್ವಾಗತ ಸಮಿತಿ ಅಧ್ಯಕ್ಷ ವೆಂಕಟರಾವ್ ನಾಡಗೌಡ, 9ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಡಾ| ರಾಜಶೇಖರ ನೀರಮಾನ್ವಿ, ಕೊಪ್ಪಳ ಸಂಸದ ಕರಡಿ ಸಂಗಣ್ಣ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಕೃಷಿ ಬೆಲೆ ಆಯೋಗ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳ ಶಾಸಕರು, ಮಾಜಿ ಸಂಸದರು, ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ಹೇಳಿದರು.
ಉದ್ಘಾಟನೆ ಸಮಾರಂಭದ ನಂತರ ನಂತರ ಒಕ್ಕಲುತನ, ಜಿಲ್ಲೆಯ ಆಧುನಿಕೋತ್ತರ ಸಾಹಿತ್ಯ, ಸಮ್ಮೇಳನಾಧ್ಯಕ್ಷ ಪ್ರೊ| ಶಾಶ್ವತಸ್ವಾಮಿ ಮುಕ್ಕುಂದಿಮಠರ ಬದುಕು ಬರಹ, ಕಾನೂನು ಅರಿವು-ನೆರವು ಗೋಷ್ಠಿಗಳು ನಡೆಯಲಿವೆ ಎಂದು ಹೇಳಿದರು.
ಅ.23ರಂದು ಸಂಕಿರಣ, ಮಹಿಳಾ ಸಂವೇದನೆ, ಜಿಲ್ಲೆಯ ಇತಿಹಾಸ ಗೋಷ್ಠಿಗಳು ನಡೆಯಲಿವೆ. ಮಧ್ಯಾಹ್ನ ಕವಿಗೋಷ್ಠಿ, ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನಿಯರಿಗೆ ಸನ್ಮಾನ, ಬಹಿರಂಗ ಅ ಧಿವೇಶನ ನಂತರ ಸಮಾರೋಪ ನಡೆಯಲಿದೆ.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ರಹಿಮತ ತರಿಕೇರಿ ಮಾತನಾಡುವರು. ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಎಲ್ಲ ಸಮಿತಿಗಳ ಸದಸ್ಯರು, ಕನ್ನಡ ಪರ ಸಂಘಟನೆಗಳ ಮುಖಂಡರು, ಸಾಹಿತಿಗಳು ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.