Advertisement

ಗೋರೆಗಾಂವ್‌ ಕರ್ನಾಟಕ ಸಂಘ: ಗೀತಾಜಯಂತಿ ಆಚರಣೆ

07:29 AM Jan 04, 2019 | |

ಮುಂಬಯಿ: ಗೋರೆಗಾಂವ್‌ ಕರ್ನಾಟಕ ಸಂಘದ ವಜ್ರ ಮಹೋತ್ಸವದ ಅಂಗವಾಗಿ ಮಹಿಳಾ ವಿಭಾಗದ ವತಿಯಿಂದ ಗೀತಾಜಯಂತಿ ಆಚರಣೆಯು ಡಿ. 19ರಂದು ಅಪರಾಹ್ನ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

Advertisement

ಗೋರೆಗಾಂವ್‌ ಕರ್ನಾಟಕ ಸಂಘದ ಬಾರಕೂರು ರುಕ್ಮಿಣಿ ಶೆಟ್ಟಿ ಮಿನಿ ಸಭಾಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ವಿಭಾಗದಿಂದ ವಿಷ್ಣು ಸಹಸ್ರ ನಾಮಾರ್ಚನೆ ಹಾಗೂ ಭಗವದ್ಗೀತೆಯ ಹದಿನೆಂಟು ಅಧ್ಯಾಯಗಳನ್ನು ಮಹಿಳೆಯರು ಭಕ್ತಿಪೂರ್ವಕವಾಗಿ ಪಠಿಸಿದರು.

ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಸದಸ್ಯೆಯರು, ತುಳು-ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next