Advertisement
ನ. 11ರಂದು ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ ಸಂಘ ಬಾಕೂìರು ರುಕ್ಮಿಣಿ ಶೆಟ್ಟಿ ಮಿನಿ ಸಭಾಗೃಹದಲ್ಲಿ ಜರಗಿದ ಪತ್ರಿಕಾ ವರದಿ ಕಲಿಕಾ ಶಿಬಿರದಲ್ಲಿ ಸಂಪನ್ಮೂಲ್ಯ ವ್ಯಕ್ತಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ದೇಶದ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾರಂಗದಲ್ಲಿ ರಾಜಕೀಯ, ಸಾಂಸ್ಕೃತಿಕ, ವಾಣಿಜ್ಯ, ವಿಜ್ಞಾನ, ಕ್ರೀಡೆ, ಅಪರಾಧ ಹೀಗೆ ಹತ್ತು ಹಲವಾರು ವಿಷಯಗಳಿಗೆ ಸಂಬಂಧಿಸಿದ ವರದಿಗಾರರು ಇರುತ್ತಾರೆ. ಪ್ರತಿಯೊಂದು ವಿಷಯಕ್ಕೂ ತನ್ನದೇ ಆದ ಮಹತ್ವವಿದ್ದು, ಆ ವಿಷಯಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿ ವರದಿಗಾರರಲ್ಲಿ ಇರಬೇಕು. ಸಮಾಜದಲ್ಲಿ ನಡೆಯುವ ಘಟನೆಗಳ ಸತ್ಯಾಸತ್ಯತೆಗಳನ್ನು ಬಿಂಬಿಸುವಲ್ಲಿ ವರದಿಗಾರರ ಪಾತ್ರ ಬಹುಮುಖ್ಯವಾಗಿದೆ. ಇಂದಿನ ಶಿಬಿರ ನಿಜಕ್ಕೂ ನನಗೆ ಸಂತೋಷವನ್ನು ತಂದುಕೊಟ್ಟಿದೆ. ಎಲ್ಲರೂ ಇದರಲ್ಲಿ ಆಸಕ್ತಿಯಿಂದ ಭಾಗವಹಿಸಿದ್ದೀರಿ. ನೀವೆಲ್ಲರೂ ಸಂಘದಲ್ಲಿ ನಡೆಯುವ ಯಾವುದೇ ಕಾರ್ಯಕ್ರಮಗಳ ವರದಿಯನ್ನು ಪತ್ರಿಕೆಗಳಿಗೆ ಕೊಡಲು ಸಶಕ್ತರಾಗಿದ್ದೀರಿ ಎನ್ನಲು ಸಂತೋಷವಾಗುತ್ತಿದೆ ಎಂದು ನುಡಿದರು.
Related Articles
Advertisement
ಅತಿಥಿ ಸೂರಪ್ಪ ಕುಂದರ್ ಅವರು ಮಾತನಾಡಿ, ವರ್ಷಕ್ಕೆ ಇಪ್ಪತ್ತೆ$çದಕ್ಕಿಂತ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಗೋರೆಗಾಂವ್ ಕರ್ನಾಟಕ ಸಂಘವು ಮುಂಬಯಿಯಲ್ಲಿ ತನ್ನದೇ ಆದ ಸ್ಥಾನಮಾನವನ್ನು ಹೊಂದಿದೆ. ಮುಂಬಯಿಯಲ್ಲಿ ಕನ್ನಡವನ್ನು ಉಳಿಸಿ-ಬೆಳೆಸುವ ಈ ಸಂಘದ ಕಾರ್ಯ ನಿಜವಾಗಿಯೂ ಅಭಿನಂದನೀಯವಾಗಿದೆ ಎಂದು ನುಡಿದರು.
ಅರುಷಾ ಶೆಟ್ಟಿ ಅವರು ಸಂಪನ್ಮೂಲ ವ್ಯಕ್ತಿ ಅಶೋಕ್ ಸುವರ್ಣ ಅವರನ್ನು ಪರಿಚಯಿಸಿದರೆ, ಸಂಘದ ಉಪಾಧ್ಯಕ್ಷ ನಾರಾಯಣ ಮೆಂಡನ್ ಅವರು ಸ್ಮರಣಿಕೆಯನ್ನಿತ್ತು ಗೌರವಿಸಿದರು. ಗ್ರಂಥಾಯನ ವಿಭಾಗದ ಸಂಚಾಲಕಿ ಶಾಂತಾ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು. ಗಾಯತ್ರಿ ರಾಮು ವಂದಿಸಿದರು. ಸಂಘದ ವಿವಿಧ ವಿಭಾಗಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ತುಳು-ಕನ್ನಡಿಗರು ಪಾಲ್ಗೊಂಡಿದ್ದರು.