Advertisement

ನಾಲ್ವರು ಹಿರಿಯ ಸಾಹಿತಿಗಳಿಗೆ ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ

10:10 PM May 18, 2023 | Team Udayavani |

ಧಾರವಾಡ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಾಲ್ವರು ಹಿರಿಯ ಸಾಹಿತಿಗಳಿಗೆ ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

Advertisement

ತುಮಕೂರಿನ ಡಾ. ಬಿ. ನಂಜುಂಡಸ್ವಾಮಿ ಅವರಿಗೆ ಶರಣ ಪ್ರಶಸ್ತಿ, ಬೆಂಗಳೂರಿನ ಡಾ. ವಿಜಯಶ್ರೀ ಸಬರದ ಶರಣ ಸಾಹಿತ್ಯ ಗ್ರಂಥ ಪ್ರಶಸ್ತಿ, ಮೈಸೂರಿನ ಡಾ. ಪಿ.ಕೆ. ರಾಜಶೇಖರ ಜಾನಪದ ಪ್ರಶಸ್ತಿ ಹಾಗೂ ಉತ್ತರ ಕನ್ನಡದ ಶಾಂತಿ ನಾಯಕ ಅವರಿಗೆ ಜನಪದ ಸಾಹಿತ್ಯ ಗ್ರಂಥ ಪ್ರಶಸ್ತಿ ನೀಡಿ, ಗೌರವಿಸಲಾಯಿತು.

ಸಾನಿಧ್ಯ ವಹಿಸಿದ್ದ ಡಂಬಳ ಗದಗದ ಜಗದ್ಗುರು ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಗೊರುಚ ಅವರ ತಮ್ಮ ಹಿರಿಯ ವಯಸ್ಸಿನಲ್ಲೂ ಉತ್ಸಾಹದಿಂದ ಸಾಹಿತ್ಯ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ. ದತ್ತಿ ನಿಧಿ ಪ್ರಶಸ್ತಿ ಪಡೆದ ನಾಲ್ವರು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಾಗಿದ್ದು, ಅವರಿಗೆ ಪ್ರಶಸ್ತಿ ನೀಡಿದ್ದು ಉತ್ತಮವಾಗಿದೆ ಎಂದರು.

ಡಾ. ವೀರಣ್ಣ ರಾಜೂರ ಮಾತನಾಡಿ, ಡಾ. ಗೊ.ರು. ಚನ್ನಬಸಪ್ಪ ಅವರು ಜಾನಪ ಹಾಗೂ ವಚನ ಸಾಹಿತ್ಯದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಆ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಶ್ರಮಿಸಿದ್ದಾರೆ. ವಿಶಿಷ್ಟವಾದ ಸಾಹಿತ್ಯ ಕೃಷಿಯನ್ನು ಮಾಡುವ ಮೂಲಕ ಶರಣ ಸಾಹಿತ್ಯ ಬೆಳವಣಿಗೆಗೆ ಕಾರಣರಾಗಿದ್ದಾರೆ ಎಂದರು.

ವಚನ ಸಾಹಿತ್ಯವನ್ನು ನಿರಂತರವಾಗಿ ಅಧ್ಯಯನ ಮಾಡುವುದರಿಂದ ಹೊಸ ವಿಚಾರಗಳು ಮುನ್ನಲೆಗೆ ಬರುತ್ತವೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬ ಸಾಹಿತಿ, ಸಂಶೋಧಕರು ಅಧ್ಯಯನ ನಡೆಸಬೇಕು ಎಂದರು.

Advertisement

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ ಮಾತನಾಡಿದರು. ಅ.ಭಾ.ಶ.ಸಾ. ಪರಿಷತ್ತಿನ ಗೌರವ ಸಲಹೆಗಾರ ಡಾ. ಗೊ.ರು. ಚನ್ನಬಸಪ್ಪ, ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಬೆಂಗಳೂರಿನ ಹಿರಿಯ ಸಾಹಿತಿ ಡಾ. ಸಿ. ವೀರಣ್ಣ, ಅ.ಭಾ.ಶ.ಸಾ. ಪರಿಷತ್ತಿನ ಅಧ್ಯಕ್ಷ ಅಪ್ಪಾರಾವ ಅಕ್ಕೋಣೆ, ವಿಜಯಶ್ರೀ ಸಬರದ, ಶ್ರೀಶೈಲ ಪಟ್ಟಣಶೆಟ್ಟಿ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ: CLP leader: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಆಯ್ಕೆ

Advertisement

Udayavani is now on Telegram. Click here to join our channel and stay updated with the latest news.

Next