ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿಯಾಗಿ ಡಾ. ಪ್ರಮೋದ್ ಸಾವಂತ್ ಸೋಮವಾರ ಪಣಜಿ ಸಮೀಪದ ಬಾಂಬೋಲಿಂ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅರವರೊಂದಿಗೆ 8 ಜನ ಶಾಸಕರು ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ರವರು ಮುಖ್ಯಮಂತ್ರಿ ಹಾಗೂ ಕ್ಯಾಬಿನೆಟ್ ದರ್ಜೆಯ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕೊಂಕಣಿಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರೊಂದಿಗೆ ಶಾಸಕ ವಿಶ್ವಜಿತ್ ರಾಣೆ, ಮಾವಿನ್ ಗುದಿನ್ಹೊ, ರವಿ ನಾಯ್ಕ, ನೀಲೇಶ್ ಕಾಬ್ರಾಲ್, ಸುಭಾಷ ಶಿರೋಡಕರ್, ರೋಹನ್ ಖಂವಟೆ, ಗೋವಿಂದ ಗಾವಡೆ, ಬಾಬೂಶ್ ಮೊನ್ಸೆರಾತ್ ರವರು ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದರು.
ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಮಂತ್ರಿ ನಿತಿನ್ ಗಡ್ಕರಿ, ಗೋವಾ ಬಿಜೆಪಿ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್, ಕೇಂದ್ರ ಸಚಿವ ಶ್ರೀಪಾದ ನಾಯ್ಕ, ಬಿಜೆಪಿ ಪ್ರಭಾರಿ ಸಿ.ಟಿ.ರವಿ, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ : ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಜೇನು ದಾಳಿ
ಗೋವಾ ರಾಜ್ಯದ ವಿವಿದೆಡೆಯಿಂದ ಕಾರ್ಯಕ್ರಮ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಜನತೆ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಭಾರಿ ಬಿಗಿ ಭಧ್ರತೆ ಕಲ್ಪಿಸಲಾಗಿತ್ತು.