ಪಣಜಿ: ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ ಕಾಲಾವಧಿಯನ್ನು ವಿಸ್ತರಣೆ ಮಾಡುವ ಬಗ್ಗೆ ಇನ್ನೊಂದೆರಡು ದಿನಗಳಲ್ಲಿ ನಿರ್ಧಾರಕ್ಕೆ ಬರಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರಿಗೆ ಪ್ರತಿಕ್ರಿಯಿಸಿದ ಸಾವಂತ್, ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿದೆ. ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಕರ್ಫ್ಯೂ ಹಿಂಪಡೆಯುವ ಬಗ್ಗೆಯಾಗಲಿ ಅಥವಾ ಮುಂದುವರೆಸುವ ಬಗ್ಗೆಯಾಗಲಿ, ಕರ್ಫ್ಯೂ ನಿರ್ಬಂಧಗಳ ಸಡಿಲಿಕೆಯ ಕುರಿತಾಗಿ ಸರ್ಕಾರದ ಮಟ್ಟದಲ್ಲಿ ಈವರೆಗೆ ಯಾವುದೇ ಚರ್ಚೆ ನಡೆದಿಲ್ಲ ಎಂದಿದ್ದಾರೆ.
ಇದನ್ನೂ ಓದಿ : ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರ ಕಾಲಿಗೆ ಗುಂಡೇಟು
ರಾಜ್ಯದಲ್ಲಿ ಕೋವಿಡ್ ಸೋಂಕಿನ ಹೊಸ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆ ಕಂಡು ಬಂದರೂ ಕೂಡ ಸೋಂಕಿನ ಗಂಭೀರತೆಯ ಹಿನ್ನೆಲೆಯಲ್ಲಿ ಇನ್ನೂ ಸ್ವಲ್ಪ ದಿನಗಳ ಕಾಲ ಕರ್ಫ್ಯೂ ನನ್ನು ವಿಸ್ತರಿಸುವಂತೆ ಸಲಹೆಗಳು ಕೇಳಿ ಬರುತ್ತಿವೆ. ಈ ಬಗ್ಗೆ ಸಚಿವ ಸಂಪುಟ ಮಟ್ಟದಲ್ಲಿ ಇನ್ನೆರಡು ದಿನಗಳಲ್ಲಿ ಸಭೆ ಕರೆದು ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದಿದ್ದಾರೆ.
ಕೋವಿಡ್ ಸೊಂಕಿನ ತೀವ್ರತೆಯ ಬಗ್ಗೆ ಎಚ್ಚರಿಕೆಯಿಂದ ಇರಬೇಕಾದದ್ದು ಎಲ್ಲರ ಕರ್ತವ್ಯವಾಗಿದೆ. ಸೋಂಕನ್ನು ಸಂಪೂರ್ಣವಾಗಿ ನಿಭಾಯಿಸುವದರಲ್ಲಿ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಜನರ ಸಹಕಾರವೂ ಮುಖ್ಯ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ಹೊರೆಯಾಗದ ರೀತಿಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು ಎಂದು ಅವರು ಕರ್ಫ್ಯೂ ವಿಸ್ತರಣೆಯ ಬಗ್ಗೆ ಸುಳಿವು ನೀಡಿದ್ದಾರೆ.
ಇದನ್ನೂ ಓದಿ : ಸಂಕಷ್ಟದಲ್ಲಿರುವ ನೇಕಾರರಿಗೆ ನೆರವಾಗಿ : ರಾಜ್ಯ ಸರಕಾರಕ್ಕೆ ಮಾಜಿ ಸಚಿವೆ ಉಮಾಶ್ರೀ ಮನವಿ