Advertisement
ನಗರದಲ್ಲಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ತುರ್ತು ವಾಹನಕ್ಕೆ ಚಾಲನೆ ನೀಡಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ವಿದೇಶಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಹಾಗೂ ತಜ್ಞರ ಸೂಚನೆಯನ್ನು ಕಡೆಗಣಿಸಿದ್ದರಿಂದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡಿ ಜನ ಸಂಕಷ್ಟವನ್ನು ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆಯೆಂದು ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಅಪಪ್ರಚಾರ ಮಾಡುವುದರಲ್ಲಿ ಬಿಜೆಪಿ ನಾಯಕರು ನಿಸ್ಸೀಂರು ಒಂದು ಸುಳ್ಳನ್ನು ನೂರು ಬಾರಿ ಹೇಳಿ ದಿಕ್ಕುತಪ್ಪಿಸುವ ರಾಜಕಾರಣ ಮಾಡುತ್ತಾರೆ ಮುಖ್ಯಮಂತ್ರಿಗಳ ಜೊತೆಗೆ 35 ಜನ ಮಂತ್ರಿ ಇದ್ದಾರೆ ಎಲ್ಲರಿಗೂ ಜವಾಬ್ದಾರಿಯಿದೆ ಇವರಿಗೆ ಜವಾಬ್ದಾರಿ ನಿರ್ವಹಿಸುದಕ್ಕೆ ಆಗುತ್ತಿಲ್ಲ ಯುದ್ದೋಪಾದಿಯಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಕೆಲಸವನ್ನು ಮಾಡಬೇಕಿತ್ತು ಯಾವುದೇ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯವಹಿಸಿದ್ದಾರೆ ಇದೇ ಇವರ ಸಾಧನೆಯೆಂದು ಕಿಡಿಕಾರಿದರು.
ರೆಮಿಡಿಸಿವಿಯರ್ ಕಾಳಸಂತೆಯಲ್ಲಿ ಮಾರಾಟ: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರ ರೆಮಿಡಿಸಿವಿಯರ್ ಖರೀದಿಸಿದೆ ಆದರೇ ಅದು ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆಯೆಂದರೆ ಇದಕ್ಕೆ ಯಾರು ಹೊಣೆಯೆಂದು ಪ್ರಶ್ನಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಸರ್ಕಾರಗಳು ಮಾಡಿದ ತಪ್ಪುಗಳಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಬಿಜೆಪಿ ಪಕ್ಷ ಸರ್ಕಾರವೇ ಕೊರೊನಾ ಸೋಂಕು ಹರಡುತ್ತಿರುವುದಕ್ಕೆ ಜನರ ಸಾವಿಗೆ ನೇರ ಹೊಣೆಯೆಂದು ಆರೋಪಿಸಿದರು.
ಜನ ಕಷ್ಟವನ್ನು ಎದುರಿಸುತ್ತಿದ್ದ ಸಂದರ್ಭದಲ್ಲಿ ಕೆಲಸ ಮಾಡಬೇಕು ಆದರೇ ಬಿಜೆಪಿ ಸರ್ಕಾರಕ್ಕೆ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕೆಲಸ ಮಾಡುವ ಉತ್ಸಾಹವಿಲ್ಲ ದೂರ ಮತ್ತು ಮುಂದಾಲೋಚನೆ ಇಲ್ಲ ಎಂದ ಅವರು ಕಳೆದ ವರ್ಷ ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಆಹಾರ ಸಾಮಾಗ್ರಿಗಳನ್ನು ಹಾಗೂ ಆರೋಗ್ಯ ಕಿಟ್‍ಗಳನ್ನು ಕಾಂಗ್ರೆಸ್ ಪಕ್ಷದಿಂದ ಹಂಚಿಕೆ ಮಾಡಿದ್ದೇವೆ ಜನರ ಆರೋಗ್ಯವನ್ನು ಕಾಪಾಡಲು ತಪಾಸಣಾ ಶಿಬಿರಗಳನ್ನು ಆಯೋಜಿಸಿದ್ದೇವೆ ಜನರ ಕಷ್ಟಗಳಿಗೆ ಸ್ಪಂದಿಸಿ ಕಾಂಗ್ರೆಸ್ ಪಕ್ಷ ಕೆಲಸ ಮಾಡುತ್ತಿದೆ ಯುವ ಕಾಂಗ್ರೆಸ್ ಸಮಿತಿಯಿಂದ ತುರ್ತು ವಾಹನಗಳ ಸೇವೆಯನ್ನು ಆರಂಭಿಸಿದ್ದೇವೆ ಜನರು ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೇಶವರೆಡ್ಡಿ,ಚಿಕ್ಕಬಳ್ಳಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯರಾಂ,ಪ್ರಧಾನ ಕಾರ್ಯದರ್ಶಿ ಸೂರಿ,ಮುಖಂಡರಾದ ಮೋಹನ್ ಅಡಗಲ್ ಶ್ರೀಧರ್,ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮುದಾಸೀರ್ ಪಾಷ ಮತ್ತಿತರರು ಉಪಸ್ಥಿತರಿದ್ದರು.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ತುರ್ತು ವಾಹನ ಆರಂಭಿಸುವ ಸೇವೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಕೇಂದ್ರದ ಮಾಜಿ ಸಚಿವ ಕೆ.ಹೆಚ್.ಮುನಿಯಪ್ಪ, ಚಾಲನೆ ನೀಡಿದರು ಈ ಸಂದರ್ಭದಲ್ಲಿ ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ,ರಾಜ್ಯ ಯುವ ಕಾಂಗ್ರೆಸ್ ಮುಖಂಡ ಮೊಹ್ಮದ್ ಹಾರೀಸ್ ನಲ್ಪಾಡ್,ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೇಶವರೆಡ್ಡಿ,ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮುದಾಸೀರ್,ಜಿಪಂ ಮಾಜಿ ಅಧ್ಯಕ್ಷ ಕೃಷ್ಣಪ್ಪ,ಪಟ್ರೇನಹಳ್ಳಿ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.