ಬಳ್ಳಾರಿ: ಸರ್ಕಾರಿ ಅಧಿಕಾರಿ ಚಂದ್ರಶೇಖರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಗಡುವು ನೀಡಿದ್ದು ಒಂದು ವೇಳೆ ರಾಜೀನಾಮೆ ನೀಡದಿದ್ದಲ್ಲಿ ಜೂನ್ 7ನೇ ತಾರೀಕಿನಂದು ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಪರಿಷತ್ ಸದಸ್ಯ ರವಿ ಕುಮಾರ್ ಹೇಳಿಕೆ ನೀಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಎಲ್ಲಾ ಮಾಜಿ ಶಾಸಕರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ತನಿಖೆ ನಡೆಯೋ ವೇಳೆ ಸಚಿವರು ತನಿಖಾಧಿರಿ ಮೇಲೆ ಪ್ರಭಾವ ಬೀರಬಹುದು. ಹೀಗಾಗಿ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಬ್ಯಾಂಕಿನ ಮತ್ತು ಕಾನೂನಿನ ನಿಯಮ ಉಲ್ಲಂಘನೆ ಮಾಡಿ ತೆಲಂಗಾಣಕ್ಕೆ ಹಣ ವರ್ಗಾವಣೆ. ಐಟಿ ಕಂಪನಿಗಳಿಗೆ ಹಣ ವರ್ಗಾವಣೆಯಾಗಿದೆ.. ದೊಡ್ಡದೊಂದು ತಲ್ಲಣ ಸೃಷ್ಟಿ ಮಾಡಿದೆ.
ಇದು ಸಾಮಾನ್ಯ ಕ್ರಿಮಿನಲ್ ಕೇಸ್ ಅಲ್ಲ.. ಸರ್ಕಾರಿ ಅಧಿಕಾರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರ ಹೊರಗೆ ತರಲಾಗದೇ ಬೇಸತ್ತು ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಗರಣದ ಹಿಂದೆ ಸರ್ಕಾರದ ಅನೇಕ ಅಧಿಕಾರಿಗಳು ಶಾಮಿಲಾಗಿದ್ದಾರೆ. ಮಂತ್ರಿ ಮತ್ತು ಹಿರಿಯ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಲಾಗದೆ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮೊದಲು ಅಕ್ರಮಕ್ಕೆ ಕಾರಣರಾದ ಅಧಿಕಾರಿಗಳ ಹೆಸರು ಬರೆದಿಟ್ಟಿದ್ದಾರೆ. ಹಾಗಾಗಿ ಪ್ರಕರಣದ ತನಿಖೆಯನ್ನು ಸಿಐಡಿ ಬದಲಿಗೆ ಸಿಬಿಐ ನಡೆಸಬೇಕು ಎಂದು ಆಗ್ರಹಿಸಿದರು.
ಈ ಹಗರಣದ ಹಿಂದೆ ಸರಕಾರದ ಕೈವಾಡ ಇದೆ ಎಲ್ಲವು ಸರಕಾರಕ್ಕೆ ಗೊತ್ತಿದ್ದೇ ನಡೆದಿರುವಂತದ್ದು ಹಾಗಾಗಿ ಸಚಿವರು ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಬೇಕು ಈ ಹಿಂದೆ ಕೆ. ಎಸ್. ಈಶ್ವರಪ್ಪ ಅವರೂ ತಮ್ಮ ಮೇಲೆ ಆರೋಪ ಬಂದ ವೇಳೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಿದ್ದಾರೆ ಅದರಂತೆ ನಾಗೇಂದ್ರ ಅವರೂ ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡುವಂತೆ ಒತ್ತಾಯಿಸಿದ್ದಾರೆ ಅಲ್ಲದೆ ಮುಂದಿನ ಜೂನ್ ೬ನೇ ತಾರೀಕಿನ ಒಳಗೆ ರಾಜೀನಾಮೆ ನೀಡಬೇಕು ಇಲ್ಲದಿದ್ದರೆ ಏಳನೇ ತಾರೀಕಿನಂದು ವಿಧಾನಸೌದದ ಗಾಂಧಿ ಪ್ರತಿಮೆ ಮುಂದೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸರ್ಕಾರದ ಆಡಳಿತ ಯಂತ್ರ ಕುಸಿದು ಹೋಗಿದೆ. ಅಧಿಕಾರಿಗಳು ಸರ್ಕಾರದ ಮಾತುಕೇಳ್ತಿಲ್ಲ. ಸರ್ಕಾರದ ಗಮನಕ್ಕೆ ಬಂದೇ ಇದೆಲ್ಲ ನಡೆದಿದೆ. ತೆಲಂಗಾಣಕ್ಕೆ ಹಣ ವರ್ಗಾವಣೆಯಾಗಿರೋದು ಸಿಎಂ ಮತ್ತು ಸಚಿವರ ಗಮನಕ್ಕೆ ಬಂದಿದೆ. ಸಿಓಡಿಯಿಂದ ನ್ಯಾಯ ನೀಡಲು ಸಾಧ್ಯವಿಲ್ಲ ಹಾಗಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಪ್ರಕರಣವನ್ನು ಪ್ರಿಯಾಂಕ್ ಖರ್ಗೆ ಮತ್ತು ಗೃಹ ಸಚಿವ ಪರಮೇಶ್ವರ ಪ್ರಕರಣ ಹಗುರವಾಗಿ ತೆಗೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಮತ್ತೆ ಪುಂಡರ ಅಟ್ಟಹಾಸ… ಕಾರು, ಬೈಕು, ರಿಕ್ಷಾಗಳ ಗಾಜು ಪುಡಿ ಪುಡಿ