ಜೆಡಿಎಸ್‌ನ ಮರಿತಿಬ್ಬೇಗೌಡ ಪ್ರಶ್ನೆಗೆ ಉತ್ತರಿಸಿ, ಸಹಕಾರಿ ಸಂಸ್ಥೆಗಳಲ್ಲಿ ಚುನಾಯಿತ ಪ್ರತಿನಿಧಿಗಳ ಜತೆಗೆ ನಾಮನಿರ್ದೇಶಿತ ಪ್ರತಿನಿಧಿಗಳನ್ನು ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ ಹಾಗೂ ನಾಮನಿರ್ದೇಶಿತ ವ್ಯಕ್ತಿಯನ್ನು ಅಧ್ಯಕ್ಷ, ಉಪಾಧ್ಯಕ್ಷನನ್ನಾಗಿ ಮಾಡಲು ಸರ್ಕಾರ ಅಥವಾ ಇಲಾಖೆ ಯಾವುದೇ ಒತ್ತಡ ಹೇರುವುದಿಲ್ಲ ಎಂದರು.
Advertisement
ಮರಿತಿಬ್ಬೇಗೌಡ ಮಾತನಾಡಿ, ಸಹಕಾರಿ ಕಾಯ್ದೆಯ ಸೆಕ್ಷನ್ 20ರ ತಿದ್ದುಪಡಿ ಮಾಡುವ ಸಂಬಂಧ ತಜ್ಞರ ಸಮಿತಿ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆಯೇ? ಚುನಾಯಿತ ಪ್ರತಿನಿಧಿಗಳ ಬದಲಿಗೆ ನಾಮನಿರ್ದೇಶಿತ ಸದಸ್ಯರನ್ನು ಅಧ್ಯಕ್ಷ, ಉಪಾಧ್ಯಕ್ಷರನ್ನಾಗಿಸಲು ಒತ್ತಡ ಹೆಚ್ಚುತ್ತಿದೆ. ಈ ರೀತಿ ಸರ್ಕಾರದ ಹಸ್ತಕ್ಷೇಪ ಸರಿಯಲ್ಲ ಎಂದು ಹೇಳಿದರು.ಈ ತಿದ್ದುಪಡಿ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ ಎಂದು ಸಚಿವರು ಉತ್ತರಿಸಿದರು.