Advertisement

ವಿವಾದಿತ ಬಹುಕೋಟಿ ಉಕ್ಕಿನ ಸೇತುವೆ ಯೋಜನೆ ಕೊನೆಗೂ ಕೈಬಿಟ್ಟ ಸರ್ಕಾರ!

11:51 AM Jun 19, 2019 | Nagendra Trasi |

ಬೆಂಗಳೂರು: ತೀವ್ರ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದ ಉಕ್ಕಿನ ಸೇತುವೆ ಯೋಜನೆಗೆ ಕೊನೆಗೂ ರಾಜ್ಯ ಸರ್ಕಾರ ಎಳ್ಳುನೀರು ಬಿಟ್ಟಿದೆ. ಉಕ್ಕಿನ ಸೇತುವೆ ಯೋಜನೆಯನ್ನು ಕೈಬಿಟ್ಟಿರುವುದಾಗಿ ಕರ್ನಾಟಕ ಸರ್ಕಾರ ಅಧಿಕೃತವಾಗಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದೆ.

Advertisement

ಬೆಂಗಳೂರಿನ ಬಸವೇಶ್ವರ ವೃತ್ತ-ಹೆಬ್ಬಾಳ ನಡುವಿನ ಉಕ್ಕಿನ ಸೇತುವೆ ಯೋಜನೆಯಿಂದ ಹಿಂದೆ ಸರಿದಿರುವುದಾಗಿ ಸ್ಪಷ್ಟಪಡಿಸಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಿದೆ.

ಉಕ್ಕಿನ ಸೇತುವೆ ನಿರ್ಮಾಣಕ್ಕೆ ವಿಜ್ಞಾನಿಗಳು, ಪರಿಸರವಾದಿಗಳು ಸೇರಿದಂತೆ ಹಲವರ ವಿರೋಧಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಸಿದ್ದವಾಗಿದ್ದ ಈ ಯೋಜನೆಗೆ ಸಮ್ಮಿಶ್ರ ಸರ್ಕಾರ ಸದ್ದಿಲ್ಲದೆ ಚಾಲನೆ ಕೊಟ್ಟಿತ್ತು. ಏತನ್ಮಧ್ಯೆ ಬಹುಕೋಟಿ ವೆಚ್ಚದ ಉಕ್ಕಿನ ಸೇತುವೆ ಯೋಜನೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಾಗೂ ನ್ಯಾಯಾಲಯದ ಕಟಕಟೆಗೆ ಹೋಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next