Advertisement

Governement Aim: ಎರಡು ವರ್ಷದಲ್ಲಿ ಎಲ್ಲ ಹೋಬಳಿಯಲ್ಲೂ ವಸತಿ ಶಾಲೆ: ಸಿಎಂ ಸಿದ್ದರಾಮಯ್ಯ

03:55 AM Jan 08, 2025 | Team Udayavani |

ಬೆಂಗಳೂರು: ಎಲ್ಲ ಹೋಬಳಿಗಳಲ್ಲಿ ವಸತಿ ಶಾಲೆಗಳ ಸ್ಥಾಪನೆ ಸರಕಾರದ ಗುರಿಯಾಗಿದೆ. ಈ ವರ್ಷ 20 ಹೊಸ ವಸತಿ ಶಾಲೆಗಳನ್ನು ಆರಂಭಿಸಲಾಗಿದ್ದು, ರಾಜ್ಯದಲ್ಲಿ ಒಟ್ಟು 841 ವಸತಿ ಶಾಲೆಗಳು ಇವೆ. ಇನ್ನು 92 ಹೋಬಳಿಗಳಲ್ಲಿ ವಸತಿ ಶಾಲೆ ಆರಂಭಿಸಬೇಕಾಗಿದ್ದು, ಮುಂದಿನ 2 ವರ್ಷಗಳಲ್ಲಿ ಇದನ್ನು ಪೂರ್ಣಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

Advertisement

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಹೊಸದಾಗಿ ಆರಂಭಿಸಲಾಗಿರುವ ಎಲ್ಲ 20 ವಸತಿ ಶಾಲೆಗಳಲ್ಲಿ ಶಿಕ್ಷಕರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.

ಎಲ್ಲ ತಾಲೂಕು ಮಟ್ಟದಲ್ಲಿ ಪಿಯು ವಸತಿ ಶಾಲೆ
ಪ್ರಸ್ತುತ ರಾಜ್ಯದಲ್ಲಿ 70 ಪಿಯು ವಸತಿ ಶಾಲೆಗಳಿದ್ದು, ಪ್ರತೀ ತಾಲೂಕು ಮಟ್ಟದಲ್ಲಿ ಕನಿಷ್ಠ 1 ಪಿಯು ವಸತಿ ಶಾಲೆ ಆರಂಭಿಸಬೇಕು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಎಲ್ಲ ವಸತಿ ಶಾಲೆಗಳಲ್ಲಿ ಕ್ರೀಡಾ ಚಟುವಟಿಕೆಗೆ ವ್ಯವಸ್ಥೆ ಮಾಡಬೇಕು. ಸ್ಥಳಾವಕಾಶ ಇದ್ದ ಕಡೆ ಕ್ರೀಡಾಂಗಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. 841 ವಸತಿ ಶಾಲೆಗಳ ಗುಣಮಟ್ಟ ವೃದ್ಧಿಗೆ ಕ್ರಮ ವಹಿಸಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next