Advertisement
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಹೊಸದಾಗಿ ಆರಂಭಿಸಲಾಗಿರುವ ಎಲ್ಲ 20 ವಸತಿ ಶಾಲೆಗಳಲ್ಲಿ ಶಿಕ್ಷಕರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.
ಪ್ರಸ್ತುತ ರಾಜ್ಯದಲ್ಲಿ 70 ಪಿಯು ವಸತಿ ಶಾಲೆಗಳಿದ್ದು, ಪ್ರತೀ ತಾಲೂಕು ಮಟ್ಟದಲ್ಲಿ ಕನಿಷ್ಠ 1 ಪಿಯು ವಸತಿ ಶಾಲೆ ಆರಂಭಿಸಬೇಕು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಎಲ್ಲ ವಸತಿ ಶಾಲೆಗಳಲ್ಲಿ ಕ್ರೀಡಾ ಚಟುವಟಿಕೆಗೆ ವ್ಯವಸ್ಥೆ ಮಾಡಬೇಕು. ಸ್ಥಳಾವಕಾಶ ಇದ್ದ ಕಡೆ ಕ್ರೀಡಾಂಗಣ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. 841 ವಸತಿ ಶಾಲೆಗಳ ಗುಣಮಟ್ಟ ವೃದ್ಧಿಗೆ ಕ್ರಮ ವಹಿಸಬೇಕು ಎಂದರು.