Advertisement

ದಿನಕ್ಕೆ 10 ಲಕ್ಷ ಆಯುಷ್ಮಾನ್‌ ಕಾರ್ಡ್‌ ವಿತರಿಸುವ ಗುರಿ

08:34 PM Sep 25, 2022 | Team Udayavani |

ನವದೆಹಲಿ: ಕೇಂದ್ರ ಸರ್ಕಾರವು ಪ್ರತಿದಿನ 10 ಲಕ್ಷ ಆಯುಷ್ಮಾನ್‌ ಭಾರತ್‌ ಕಾರ್ಡ್‌ಗಳನ್ನು ವಿತರಿಸುವ ಗುರಿ ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ ಮಾಂಡವಿಯ ತಿಳಿಸಿದ್ದಾರೆ.

Advertisement

ಆಯುಷ್ಮಾನ್‌ ಭಾರತ್‌ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನ ಆರಂಭಿಸಿ ನಾಲ್ಕು ವರ್ಷಗಳು ಹಾಗೂ ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ ಆರಂಭಿಸಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮಂಥನ ಕಾರ್ಯಕ್ರಮದಲ್ಲಿ ಅವರು ಈ ಮಾತನ್ನಾಡಿದ್ದಾರೆ.

“ಮೊದಲು ದಿನಕ್ಕೆ 1-1.5 ಲಕ್ಷ ಆಯುಷ್ಮಾನ್‌ ಕಾರ್ಡ್‌ ವಿತರಿಸಲಾಗುತ್ತಿತ್ತು. ಈಗ ಅದು 4-5 ಲಕ್ಷಕ್ಕೆ ಏರಿದೆ. ಅದನ್ನು 10 ಲಕ್ಷಕ್ಕೆ ಏರಿಸುವ ಗುರಿ ಹಾಕಿಕೊಂಡಿದ್ದೇವೆ’ ಎಂದು ಅವರು ಹೇಳಿದರು.

ದೇಶದಲ್ಲಿ ಒಟ್ಟು 28,300 ಆಸ್ಪತ್ರೆಗಳು ಈಗಾಗಲೇ ಈ ಯೋಜನೆಯೊಂದಿಗೆ ಕೈ ಜೋಡಿಸಿವೆ ಎಂದೂ ಅವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next