Advertisement
ಭ್ರಷ್ಟಾಚಾರದ ವಿಷಯದಲ್ಲಿ ಬಿಜೆಪಿ ಎಂದೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಕಣ್ಣಂತಾನಂ ನುಡಿದರು.ಬೆಳಗ್ಗೆ ಕಾಸರಗೋಡಿಗೆ ತಲುಪಿದ ಕೇಂದ್ರ ಸಚಿವರಿಗೆ ಬಿಜೆಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸ್ವಾಗತ ನೀಡಲಾಯಿತು. ಬಳಿಕ ಪ್ರವಾಸೋದ್ಯಮ ಅಭಿವೃದ್ಧಿ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿದರು. ಅನಂತರ ಪೆರ್ಲ ಸೇವಾ ಸಹಕಾರಿ ಬ್ಯಾಂಕ್‌ನ ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಉದ್ಘಾಟಿಸಿ ಎಣ್ಮಕಜೆ ಪಂಚಾಯತ್‌ನ ನವೀಕರಿಸಿದ ರಸ್ತೆಯನ್ನು ಉದ್ಘಾಟಿಸಿದರು. ಬಳಿಕ ಕಾಂಞಂಗಾಡ್‌ನ ವಿಶ್ವಕರ್ಮ ಕಲಾ ಮಂದಿರ ಉದ್ಘಾಟಿಸಿದರು. ಬಿಜೆಪಿ ವತಿಯಿಂದ ನೀಡಿದ ಕಾರ್ಯಕ್ರಮದಲ್ಲಿ ಹಲವಾರು ನೇತಾರರು ಭಾಗವಹಿಸಿದರು. ಇದಕ್ಕೂ ಮೊದಲು ಕಾಂಞಂಗಾಡ್ ಜವಾಹರ್ ಕಾಲೇಜಿನ ಪ್ರಾಂಶುಪಾಲೆ ಪುಷ್ಪಜಾ ಅವರ ಮನೆಗೆ ಭೇಟಿ ನೀಡಿ ಪ್ರಾಂಶುಪಾಲೆಯನ್ನು ಸಂತೈಸಿದರು.
ಪ್ರವಾಸೋದ್ಯಮ ವಿಚಾರಗೋಷ್ಠಿ
ಕೇರಳದಲ್ಲಿ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶಗಳಿದ್ದು, ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಿರು ಉದ್ದಿಮೆಗಳು, ಬಂಡವಾಳ ಹೂಡಿಕೆದಾರರು ಮುಂದೆ ಬರಬೇಕೆಂದು ಕೇಂದ್ರ ಸಚಿವ ಕಣ್ಣಂತಾನಂ ಹೇಳಿದರು. ಬಿಜೆಪಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಸರಗೋಡು ಮುನ್ಸಿಪಲ್ ವನಿತಾ ಭವನದಲ್ಲಿ ಆಯೋಜಿಸಿದ ಪ್ರವಾಸೋದ್ಯಮ ಅಭಿವೃದ್ಧಿ ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇರಳದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತಮ ಅವಕಾಶಗಳಿದ್ದರೂ, ಅವುಗಳನ್ನು ಬಳಸಿಕೊಳ್ಳಲು ರಾಜ್ಯ ಸರಕಾರ ವಿಫಲವಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಕೇರಳದಲ್ಲಿ ಪ್ರವಾಸೋದ್ಯಮ ನೆಲಕಚ್ಚಲಿದೆ. ಪ್ರವಾಸೋದ್ಯಮದಲ್ಲಿ ಅತ್ಯಾಧುನಿಕ ತಾಂತ್ರಿಕತೆಯನ್ನು ಬಳಸಿಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯ ದರ್ಶಿ ಎ. ವೇಲಾಯುಧನ್ ಸ್ವಾಗತಿಸಿ ದರು. ವಲಿಯಪರಂಬ ಪಂ. ಅಧ್ಯಕ್ಷ ಅಬ್ದುಲ್ ಜಬ್ಟಾರ್, ಜೋಸೆಫ್ ಕನಕಮೊಟ್ಟ, ಜೋಸ್ ಪುಳಿಂಜಿಕುನ್ನೇಲ್, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದರು.