ಬೆಂಗಳೂರು: ತೀವ್ರ ಬೇಡಿಕೆ ಹಾಗೂ ಒತ್ತಡದ ಹಿನ್ನೆಲೆ ಕೊನೆಗೂ ರಾಜ್ಯದಲ್ಲಿ ಚಿತ್ರಮಂದಿರಗಳ 100 % ಸೀಟು ಭರ್ತಿಗೆ ಸರ್ಕಾರ ಅನುಮತಿ ನೀಡಿದೆ.
Advertisement
ಅಕ್ಟೋಬರ್ 1 ರಿಂದ ಚಿತ್ರಮಂದಿರಗಳಲ್ಲಿ ಸಂಪೂರ್ಣ ಸೀಟು ಭರ್ತಿಗೆ ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕೆಲವೊಂದು ಮಾರ್ಗಸೂಚಿಗಳನ್ನು ಸೂಚಿಸಿದೆ.
ಪಾಸಿಟಿವಿಟಿ ದರ ಶೇಕಡಾ 1ಕ್ಕಿಂಡ ಕಡಿಮೆ ಇರುವ ಜಿಲ್ಲೆಗಳಲ್ಲಿ ಚಿತ್ರಮಂದಿರಗಳ ಎಲ್ಲ ಆಸನಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಜೊತೆಗೆ ಥಿಯೆಟರ್ ಪ್ರವೇಸಿಸಲು ಪ್ರೇಕ್ಷಕರು ಕಡ್ಡಾಯವಾಗಿ ಒಂದು ಡೋಸ್‍ನಾದರೂ ಲಸಿಕೆ ಪಡೆದಿರಬೇಕೆಂದು ಹೇಳಿದೆ.