Advertisement

ಪಿಪಿಪಿ ಮಾದರಿಯಲ್ಲಿ ಸರ್ಕಾರಿ ಕಟ್ಟಡ ನಿರ್ಮಾಣ ಚಿಂತನೆ: ಎಂ.ಟಿ.ಬಿ ನಾಗರಾಜ

09:03 PM Feb 18, 2022 | Team Udayavani |

ವಿಧಾನಸಭೆ : ರಾಜ್ಯದ ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಬರುವ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ನಿರ್ಮಾಣ ಮಾಡಲು ಪಿಪಿಪಿ ಮಾದರಿ ಅಳವಡಿಸಿಕೊಳ್ಳಲು ಚಿಂತನೆ ನಡೆದಿದೆ ಎಂದು ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ್‌ ಹೇಳಿದ್ದಾರೆ.

Advertisement

ಪ್ರಶ್ನೋತ್ತರ ಕಲಾಪದಲ್ಲಿ ಸಾಗರ ಶಾಸಕ ಹರತಾಳು ಹಾಲಪ್ಪ ಕೇಳಿದಪ್ರಶ್ನೆಗೆ ಉತ್ತರಿಸಿದ ಅವರು, ಹೊಸನಗರ ಪಟ್ಟಣ ಪಂಚಾಯತಿಗೆ ನೂತನ ಕಟ್ಟಡ ನಿರ್ಮಿಸಲು ಜಿಲ್ಲಾಧಿಕಾರಿಗಳು 6.37 ಕೋಟಿ ರೂ| ಬಿಡುಗಡೆ ಮಾಡಲು ಪ್ರಸ್ತಾವನೆ ಸಲ್ಲಿಸಿದ್ದರು. ಆರ್ಥಿಕ ಇಲಾಖೆಯ ಪ್ರಕಾರ ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಕಟ್ಟಡಗಳ ದುರಸ್ಥಿ ಹಾಗೂ ನಿರ್ಮಾಣಕ್ಕೆ 64.68 ಕೋಟಿ ರೂ.ಗಳ ಕಾಮಗಾರಿ ಬಾಕಿ ಉಳಿದಿದೆ.

ಹೀಗಾಗಿ ರಾಜ್ಯ ಸರ್ಕಾರದ ಅನುದಾನವನ್ನು ಅವಲಂಬಿಸದೇ, ಇತರೆ ವಾಣಿಜ್ಯ ಸಂಕೀರ್ಣಗಳ ಜೊತೆಗೆ ಕಟ್ಟಡ ನಿರ್ಮಾಣಕ್ಕಾಗಿ ಪಿಪಿಪಿ ಮಾದರಿ ಅನುಸರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.

 

Advertisement

Udayavani is now on Telegram. Click here to join our channel and stay updated with the latest news.

Next